ʻಉಡುಪಿ ಜಿಲ್ಲೆಯಲ್ಲಿ ಅರಣ್ಯ ವಿಸ್ತೀರ್ಣ ಪ್ರಮಾಣ ಹೆಚ್ಚಳʼ 

ಉಡುಪಿ, ಸೆ.1೨- ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕಳೆದ 10 ವರ್ಷ ಗಳಲ್ಲಿ ಅರಣ್ಯ ವಿಸ್ತೀರ್ಣ ಪ್ರಮಾಣವು ಹೆಚ್ಚಳವಾಗಿದ್ದು, ಜಿಲ್ಲೆಯ ಕಾಂಡ್ಲಾವನದ ವಿಸ್ತೀರ್ಣ ಕೂಡ ವಿಸ್ತರಣೆಯಾಗಿದೆ. ಇದಕ್ಕೆ ಅರಣ್ಯ ರಕ್ಷಕರು ಮತ್ತು ವೀಕ್ಷಕರು ದಕ್ಷ, ಪ್ರಾಮಾಣಿಕರಾಗಿ ಕಾರ್ಯನಿರ್ವಹಿಸಿರುವುದೇ ಕಾರಣ ಎಂದು ಕುಂದಾ ಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಹೇಳಿದ್ದಾರೆ.

ಅವರು ನಿನ್ನೆ ಉಡುಪಿಯ ಐ.ಎಂ.ಎ ವನದಲ್ಲಿ, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿ ಸಂಘ (ರಿ), ಅರಣ್ಯ ರಕ್ಷಕರ ಮತುತಿ ವೀಕ್ಷಕರ ಸಂಘ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆ ರಕತಿನಿಧಿ ಕೇಂದ್ರದ ಸಹಯೋಗದಲ್ಲಿ  ನಡೆದ  ಅರಣ್ಯ ಹುತಾತ್ಮರ ಸ್ಮರಣಾರ್ಥ ನಡೆದ 22 ನೇ ವರ್ಷದ ರಕ್ತದಾನ ಶಿಬಿರದಲ್ಲಿ ಸ್ವಯಂ ರಕತಿದಾನ ಮಾಡಿ, ಶಿಬಿರ ಉದ್ಘಾಟಿಸಿ ಮಾತನಾಡಿದರು. ಅರಣ್ಯ ರಕ್ಷಿಸಿ ಬೆಳಸುವಲ್ಲಿ ಅರಣ್ಯ ಇಲಾಖೆಯ ಅರಣ್ಯ ರಕ್ಷಕರು ಮತ್ತು ವೀಕ್ಷಕರ ಕಾರ್ಯವು ಅತ್ಯಂತ ಪ್ರಮುಖವಾಗಿದ್ದು, ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲಿ ಅರಣ್ಯದ ವಿಸ್ತೀರ್ಣವು ಹೆಚ್ಚಾಗುವಲ್ಲಿ ಇವರ ಪಾತ್ರ ಮಹತ್ವ ದ್ದಾಗಿದೆ. ಉಡುಪಿ ಜಿಲ್ಲೆಯಲ್ಲಿನ ಪಶ್ಚಿಮ ಘಟ್ಟದ ಜೀವ ವೈವಿದ್ಯವನ್ನು ಉಳಿಸಿ, ಬೆಳೆಸುವುದರಲ್ಲಿ ಅರಣ್ಯ ಇಲಾಖೆ ಮಾತ್ರವಲ್ಲದೇ ಸಾರ್ವಜನಿಕರೂ ಭಾಗೀ ದಾರಿಕೆಯೂ ಅತ್ಯಗತ್ಯ ಎಂದರು. ಕರ್ನಾಟಕ ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೇಶವ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 22 ರಕ್ತದಾನ ಶಿಬಿರಗಳನ್ನು ಆಯೋಜಿಸಿ 2000 ಯೂನಿಟ್‌ಗೂ ಅಧಿಕ ರಕ್ತವನ್ನು ಸಿಬ್ಬಂದಿಗಳು ದಾನ ಮಾಡಿದ್ದಾರೆ. ಮಾತ್ರವಲ್ಲದೆ ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಂದ ಬರುವ ದೂರವಾಣಿ ಕರೆಗಳಿಗೆ ಸ್ಪಂದಿಸಿ, ಆಸ್ಪತ್ರೆಗಳಿಗೆ ತೆರಳಿ ರೋಗಿಗಳಿಗೆ ರಕ್ತದಾನ ಮಾಡಲಾಗುತ್ತಿದೆ ಎಂದರು. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಬಿಲ್ಲವ ವಹಿಸಿದ್ದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ, ಐಎಂಎ ಅಧ್ಯಕ್ಷ ಡಾ.ವಿನಾಯಕ ಶೆಣೈ,  ಮಂಗಳೂರು ಅರಣ್ಯ ಜಾಗೃತ ದಳದ ಅಧಿಕಾರಿ ಶ್ರೀಧರ್, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ನಿಕಟಪೂರ್ವ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಉಡುಪಿ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್, ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಗೌರವಾಧ್ಯಕ್ಷ ಪ್ರಕಾಶ್ಚಂದ್ರ, ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘದ ಗೌರವಾಧ್ಯಕ್ಷ ದೇವರಾಜ ಪಾಣ ಎಚ್., ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ಉಪಸ್ಥಿತರಿದ್ದರು. ಸಂಘದ ಪ್ರದಾನ ಕಾರ್ಯದರ್ಶಿ ವೀರಣ್ಣ ಮಾಯಾಚಾರಿ ಸ್ವಾಗತಿಸಿದರು. ಉಪಾಧ್ಯಕ್ಷ ಕರುಣಾಕರ ಜೆ.ಆಚಾರ್ಯ ವಂದಿಸಿದರು. ಕಾರ್ಯಕ್ರಮದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಗೆ ಗೌರವ ಸಲ್ಲಿಕೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಗಳಿಂದ ರಕ್ತದಾನ ನಡೆಯಿತು.