ʻಬ್ಯಾಂಕಿಂಗ್ ಸೇವೆಯಲ್ಲಿ ಎಸ್‌ಸಿಡಿಸಿಸಿ ದೇಶಕ್ಕೆ ಮಾದರಿʼ

ಮಂಗಳೂರು, ಎ.೪- ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಹಕಾರಿ ರಂಗದಲ್ಲಿ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ತನ್ನ 105 ಶಾಖೆಗಳ ಮೂಲಕ ನೀಡುತ್ತಿದೆ. ಕಳೆದ ಮಾರ್ಚ್ 31,2021 ಆರ್ಥಿಕ ವರ್ಷ ಅಂತ್ಯದ ಲ್ಲಿ ಕೊರೋನ ಸಂಕಷ್ಟದ ನಡುವೆಯೂ ಬ್ಯಾಂಕ್ ರೂ.33.65 ಕೋಟಿ ರೂ. ದಾಖಲೆಯ ಲಾಭಗಳಿಕೆ ಮಾಡಿದೆ .ಇದು ಬ್ಯಾಂಕಿನ ಇತಿಹಾಸದಲ್ಲಿ ದಾಖಲಾದ ಲಾಭಗಳಿಕೆ ಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಂ. ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಅವರು ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

107 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್  2021-22ನೆ ಸಾಲಿನಲ್ಲಿ 1000 ಕೋಟಿ ರೂಗಳ  ವ್ಯವಹಾರದ ಗುರಿಯನ್ನು ಹೊಂದಿದೆ. ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಗ್ರಾಹಕರನ್ನು ಹೆಚ್ಚು ಆಕರ್ಷಿ ಸುತ್ತಿದೆ. ಕಳೆದ ಆರ್ಥಿಕ  ವರ್ಷದಲ್ಲಿ ,ಬ್ಯಾಂಕ್ ರೂ.1000.30 ಕೋಟಿ ರೂ. ಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ.19.30 ಏರಿಕೆಯನ್ನು ಕಂಡಿದೆ. ಸಾಮಾನ್ಯವಾಗಿ ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಬ್ಯಾಂಕ್ ತನ್ನ 105 ಶಾಖೆಗಳ ಮುಖಾಂತರ 2020-21ನೇ ಸಾಲಿನಲ್ಲಿ ಒಟ್ಟು ರೂ.4948.34ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ,ಬ್ಯಾಂಕ್‌ಗಳಲ್ಲಿ ಮುಂಚೂಣಿ ಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ.17.65 ಏರಿಕೆಯಾಗಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಸ್ಪರ್ಧಾತ್ಮಕ ಆರ್ಥಿಕ ಹಿನ್ನಡೆಯಲ್ಲಿಯೂ ಬ್ಯಾಂಕ್ ರೂ 3712.67 ಕೋಟಿ ರೂ.ಮುಂಗಡ ನೀಡಿದೆ.ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.1596,04 ಕೋಟಿ ರೂಪಾಯಿ, ಮಧ್ಯಮಾ ವಧಿ ಸಾಲ ರೂ.129.34ಕೋಟಿ ರೂಪಾಯಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ.1725 38 ಕೋಟಿ ರೂ. ನೀಡಲಾಗಿದೆ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ ರೂ.55196 ಕೋಟಿಯಾಗಿರುತ್ತದೆ. ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡಾ 100ರ ಸಾಧನೆ ಗೈದು  ನಿರ್ಮಿಸಿ ಸಾಧನೆಗೈದಿದೆ.  ಕಳೆದ 26 ವರ್ಷಗಳಿಂದ ಸತತವಾಗಿ ಈ ಸಾಧನೆ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. ಬ್ಯಾಂಕ್ ಗೆ  ಒಟ್ಟು  1013 ಸದಸ್ಯ ಸಂಘಗಳಿವೆ ಇವುಗಳ ಪಾಲು ಬಂಡವಾಳ 263.43ಕೋಟಿ ಆಗಿರುತ್ತದೆ. ಇದು ಕಳೆದ ವರ್ಷಕ್ಕಿಂತ ಶೇ.27.24 ಏರಿಕೆಯಾಗಿದೆ. ದುಡಿಯುವ ಬಂಡವಾಳ ರೂ.7212.71 ಕೋಟಿ ಆಗಿದ್ದು, ಇದು ಕಳೆದ ವರ್ಷಕ್ಕಿಂತ (ರೂ.610.59 ಕೋಟಿ) ಶೇಕಡ 18.04 ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ,136.07 ಕೋಟ ವಿವಿಧ ನಿಧಿಗಳನ್ನು ಹೊಂದಿರುತ್ತದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕ್ರೆಡಿಟ್ ಕಾರ್ಡ್‌ನ್ನು ನೀಡಿದೆ. ಈಗಾಗಲೇ 1,19,228 ರೂಪೇ ಕಿಸಾನ್ ಕಾರ್ಡ್‌ಗಳನ್ನು ರೈತರಿಗೆ ವಿತರಿಸಲಾಗಿದೆ. 58,910 ರುಪೇ ಡೆಬಿಟ್ ಕಾರ್ಡ್ ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ. ಜನರ ಬಳಿಗೆ ನಮ್ಮ ಬ್ಯಾಂಕ್ ಅಭಿಯಾನ” : ಬ್ಯಾಂಕ್ ಇತಿಹಾಸದಲ್ಲೇ ಪ್ರಥಮ ಬಾರಿಗೆ ಜನರ ಬಳಿಗೆ ನಮ್ಮ ಬ್ಯಾಂಕ್ ” ಎನ್ನುವ ಆಶಯ ದೊಂದಿಗೆ 2021ರ ಜನವರಿ – 1 ರಿಂದ ಮಾರ್ಚ್ 31 ರವರೆಗೆ ಆರಂಭಿಸಿದ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈ ಅಭಿಯಾನ ದಲ್ಲಿ 24036 ಹೊಸ ಉಳಿತಾಯ ಖಾತೆ ತೆರೆಯಲಾಗಿದೆ.ರೂ.48.77ಕೋಟಿ ರೂ ಠೇವಣಿ ಸಂಗ್ರಹ ವಾಗಿದ್ದು, 118.84ಕೋಟಿ ಸಾಲ ನೀಡಲಾಗಿದೆ ಎಂದು ಅವರು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕ ರಾದ ಟಿ.ಜಿ.ರಾಜರಾಮ್,ಭಾಸ್ಕರ ಎಸ್ ಕೋಟ್ಯಾನ್, ವಾದಿರಾಜ ಶೆಟ್ಟಿ, ಕೆ.ಎಸ್. ದೇವರಾಜ್,ಎಸ್.ರಾಜು ಪೂಜಾರಿ, ಶಶಿಕುಮಾರ್ ರೈ, ಎಸ್.ಬಿ.ಜಯರಾಮ ರೈ, ದೇವಿಪ್ರಸಾದ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಹರಿಶ್ಚಂದ್ರ, ಮಹೇಶ್ ಹೆಗ್ಡೆ, ಜೈರಾಜ್, ಅಶೋಕ್ ಕುಮಾರ್, ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ. ಬಿ. ಮೊದಲಾದವರು ಉಪಸ್ಥಿತರಿದ್ದರು.