ʻಸರ್ಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಜನತೆಗೆ ಮಾಹಿತಿ ತಲುಪಿಸಿʼ 

ಉಡುಪಿ, ನ.1೫- ಬಿಜೆಪಿ ಸರಕಾರದ ಅವಧಿಯಲ್ಲಿ ದೇಶ ಮತ್ತು ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಆರ್ಥಿಕ ಹಿಂದುಳಿದವರಿಗೆ ದೊರಕಿದ ಸೌಲಭ್ಯಗಳು, ರಾಷ್ಟ್ರದ ಹಿತಕ್ಕಾಗಿ ಜಾರಿಗೊಳಿಸಿದ ಮಸೂದೆ, ಕಾನೂನು ಗಳನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೆ ತಲುಪಿಸುವ ಜವಾಬ್ದಾರಿಯನ್ನು ಪಕ್ಷದ ಪ್ರತಿಯೊಬ್ಬ ನಾಯಕ ಮತ್ತು ಕಾರ್ಯಕರ್ತರು ಮಾಡಬೇಕು ಎಂದು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಣಿಪಾಲದ ಸರಳೇಬೆಟ್ಟುನ ಶಿವಪ್ಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆದ ಬಿಜೆಪಿಯ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. 75 ವರ್ಷಗಳ ಅವಧಿಯಲ್ಲಿ ಪ.ಜಾತಿ ಹಾಗೂ ಪ.ಪಂಗಡದ ಜನರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸ ಲಾತಿಯನ್ನು ಹೆಚ್ಚಿಸಿದ್ದೇವೆ. ಹಿಂದುಳಿದ ವರ್ಗ ಮತ್ತು ಆರ್ಥಿಕ ಹಿಂದುಳಿದವರಿಗೆ ಸರಕಾರದಿಂದ ದೊರಕುವ ಸೌಲಭ್ಯದಲ್ಲಿ ಕಡಿತ ಗೊಳಿಸದೇ, ಪ.ಜಾತಿ ಮತ್ತು ಪಂಗಡದ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಹೆಚ್ಚಿಸಿದ್ದೇವೆ ಎಂದರು. ಮೀಸಲಾತಿ ಹೆಚ್ಚಿಸಿರುವುದರಿಂದ ವಾರ್ಷಿಕ ಪ.ಜಾತಿಯವರಿಗೆ 18,000 ಕೋಟಿ ರೂ. ಹಾಗು ಪ.ಪಂಗಡವರಿಗೆ 10,500 ಕೋಟಿ ರೂ. ಅನುದಾನ ದೊರಕುತ್ತದೆ. 800 ಕೋಟಿ. ರೂ ವೆಚ್ಚದಲ್ಲಿ 75 ಯೂನಿಟ್ ವಿದ್ಯುತ್ ಉಚಿತ ವಾಗಿ ನೀಡಲಾಗುತ್ತಿದ್ದು, 24.50 ಲಕ್ಷ ಕುಟುಂಬಗಳು ಈ ಯೋಜನೆಯ ಲಾಭವನ್ನು ಪಡೆದುಕೊಂಡಿದೆ ಎಂದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಸ್ತುವಾರಿ ಭಾಗೀರಥಿ ಮುರು ಳಿಯ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ರಾಷ್ಟ್ರೀಯ ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯೆ ಶ್ಯಾಮಲಾ ಎಸ್. ಕುಂದರ್ ಉಪಸ್ಥಿತರಿದ್ದರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಹರೀಶ್ ಕಾರ್ಯಕ್ರಮ ನಿರೂಪಿಸಿ, ರಶ್ಮಿತಾ ಬಾಲಕೃಷ್ಣ ಶೆಟ್ಟಿ ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ದೇವಸ್ಥಾನದ ಗೋಶಾಲೆಯಲ್ಲಿ ಗೋಪೂಜೆ ಯನ್ನು ನೆರವೇರಿಸಲಾಯಿತು.