ʻಹಸಿಕಸ-ಒಣಕಸ ವಿಲೇವಾರಿ ಬಗ್ಗೆ ಜಾಗೃತಿ ಮೂಡಿಸಿʼ  

ಮಂಗಳೂರು, ಸೆ.1೬- ದ.ಕ.ಜಿಲ್ಲೆಯ ಎಲ್ಲಾ ತಾಪಂ ಇಒ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿವಿಧ ವಿಷಯಗಳ ಕುರಿತಯ ನಗರದ ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಗುರುವಾರ ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ದ.ಕ. ಜಿಪಂ ಸಿಇಒ ಡಾ.ಕುಮಾರ್ ಕಡತಗಳ ನಿರ್ವಹಣೆಯಲ್ಲಿ ಕಳೆದು ಹೋಗದೆ ಆತ್ಮತೃಪ್ತಿಯಿಂದ ಸೇವೆ ಸಲ್ಲಿಸುವಂತೆ ಕರೆ ನೀಡಿದರು. ಗ್ರಾಪಂ ವ್ಯಾಪ್ತಿಯಲ್ಲಿ ಗ್ರಂಥ ಮಿತ್ರ ಯೋಜನೆಯ ಅನುಷ್ಠಾನ ಸಮಪರ್ಕವಾಗಬೇಕು. ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳನ್ನು ಗ್ರಾಮಗಳ ಗ್ರಂಥಾಲಯಗಳತ್ತ ಆಕರ್ಷಿಸುವ ಕೆಲಸ ಮಾಡಬೇಕು. ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ಶಾಲಾ ಆವರಣ ಬೀದಿಗಳು ಆಟದ ಮೈದಾನಗಳ ಸುತ್ತಮುತ್ತ ಶ್ರಮದಾನ ಏರ್ಪಡಿಸಬೇಕು. ಮೂಲದಲ್ಲೇ ಹಸಿಕಸ ಮತ್ತು ಒಣಕಸ ವಿಲೇವಾರಿ ಮಾಡುವ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು ಎಂದು ಡಾ.ಕುಮಾರ್ ಮಾಹಿತಿ ನೀಡಿದರು. ಜಿಪಂ ಉಪ ಕಾರ್ಯದರ್ಶಿ ಕೆ. ಆನಂದಕುಮಾರ್, ಯೋಜನಾ ನಿರ್ದೇಶಕ ಎಚ್.ಆರ್. ನಾಯಕ್, ಮುಖ್ಯಯೋಜನಾಧಿಕಾರಿ ಸಂಧ್ಯಾ ಕೆ.ಎಸ್,, ತಾಪಂ ಇಒಗಳಾದ ಭವಾನಿ ಶಂಕರ್, ಕುಸುಮಾಧರ್, ದಯಾವತಿ, ರಾಜಣ್ಣ ಹಾಗೂ ಸ್ವಚ್ಛಭಾರತ್ ಮಿಷನ್ ಜಿಲ್ಲಾ ಸಮಾಲೋಚಕ ಡೊಂಬಯ್ಯ ಇಡ್ಕಿದು, ಪವನ್ ಕುಮಾರ್‌ಎಸ್. ಶೆಟ್ಟಿ ಹಾಗೂ ನವೀನ್, ಜಲಜೀವನ್ ಮಿಷನ್‌ನ  ವಿಘ್ನೇಶ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.