ಅಂಗನವಾಡಿಗಳಲ್ಲಿ ಸಿಸಿಟಿವಿ ಅಳವಡಿಸಲು ಮನವಿ

ಕಲಬುರಗಿ,ಆ 11 ನಗರದ ಅಂಗನವಾಡಿ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸುವಂತೆ ಕರವೇ ಕಾವಲುಪಡೆ ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಮನವಿ ಮಾಡಿದ್ದಾರೆ.
ಕಲಬುರಗಿ ನಗರದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ಮಹಿಳೆಯರಿಗೆ ನೀಡುವ ಆಹಾರವನ್ನು ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದ ಅವರು ಕೂಡಲೇ ಜಿಲ್ಲಾಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ದಿನನಿತ್ಯ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಕಡ್ಡಾಯವಾಗಿ ಆಹಾರ ಪೂರೈಕೆ ಮಾಡಲು ಮನವಿ ಮಾಡಿದ್ದಾರೆ.