ಅಂಗನವಾಡಿ ಕಟ್ಟಡಗಳ ಉದ್ಘಾಟನೆ, ಕಾಮಗಾರಿಗಳಿಗೆ ಶಾಸಕ ಯತ್ನಾಳ ಭೂಮಿಪೂಜೆ

ವಿಜಯಪುರ ಡಿ.24:ನಗರದ ವಿವಿಧೆಡೆ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕಟ್ಟಡಗಳು, ಶಾಲಾ ಕೊಠಡಿಗಳ ಉದ್ಘಾಟನೆ ವಸತಿ ನಿಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನಗರ ಶಾಸಕÀ ಬಸನಗೌಡ ಪಾಟೀಲ ಯತ್ನಾಳ ಅವರು ಶನಿವಾರ ನೆರವೇರಿಸಿದರು.

ಮಹಾನಗರ ಪಾಲಿಕೆ ವಾಡ್ರ್À ನಂ.7ರಲ್ಲಿ ಬರುವ ಡೋಬಳೆ ಗಲ್ಲಿಯಲ್ಲಿ ಶಿವಾಜಿ ವೃತ್ತದ ಬಳಿಯ ಸರ್ಕಾರಿ ಹೆಣ್ಣು ಮಕ್ಕಳ ಶಾಲೆ ನಂ.11 ರಲ್ಲಿ, ನೂತನವಾಗಿ ನಿರ್ಮಿಸಲಾದ ಶಾಲಾ ಕೊಠಡಿ ಮತ್ತು ಅಂಗನವಾಡಿ ಕಟ್ಟಡ ಉದ್ಘಾಟಿಸಿದರು.

ನಂತರ ಅಫ್ಜಲಪುರ ಟಕ್ಕೆ ಕೇಂದ್ರಿಯ ವಿದ್ಯಾಲಯ ಹತ್ತಿರ ಲೋಕೋಪಯೋಗಿ ಇಲಾಖೆಯ ರೂ.6.5 ಕೋಟಿ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಿದ ಬಳಿಕ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಸಿಹಿ ತಿನಿಸಿದರು. ನಂತರ ಸಾರ್ವಜನಿಕರಿಂದ ಅಹವಾಲು ಆಲಿಸಿದ ಶಾಸಕರು, ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡಿದರು. ಇದೇ ವೇಳೆ ಸ್ಥಳೀಯ ನಿವಾಸಿಗಳು ಶಾಸಕರಿಗೆ ಆತ್ಮೀಯವಾಗಿ ಸನ್ಮಾನಿಸಿದರು.

ಮಹಾನಗರ ಪಾಲಿಕೆ ಸದಸ್ಯ ರಾಹುಲ್ ಜಾಧವ, ನೌಕರರÀ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ಸೇರಿದಂತೆ ಮುಖಂಡರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಮತ್ತಿತರರು ಇದ್ದರು.