ಅಂಗನವಾಡಿ ಕಾರ್ಯಕರ್ತರಿಗೆ ಜಾಗೃತಿ ಕಾರ್ಯಗಾರ

ಹುಳಿಯಾರು, ಜು. ೨೮- ಚಿಕ್ಕನಾಯಕನಹಳ್ಳಿ ಮೊಬಿಲಿಟಿ ಇಂಡಿಯಾ ಸಮುದಾಯ ಆಧಾರಿತ ಸಮನ್ವಯ ಅಭಿವೃದ್ಧಿ ಕಚೇರಿ ಹಾಗೂ ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಅಂಗನವಾಡಿ ಕಾರ್ಯಕರ್ತರಿಗೆ ಪುನರ್ವಸತಿ ಸೇವೆಗಳಲ್ಲಿ ಸಮಯೋಚಿತ ಚಿಕಿತ್ಸೆ ಕುರಿತು ಜಾಗೃತಿ ಕಾರ್ಯಗಾರವನ್ನು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿತ್ತು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೆಎಂಎಲ್ ಕಿರಣ್ ಉದ್ಘಾಟಿಸಿ ಸಂಸ್ಥೆಯ ಕಾರ್ಯಕ್ರಮವನ್ನು ಶ್ಲಾಘಿಸಿ, ಈ ಕಾರ್ಯಕ್ರಮಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮ ವ್ಯವಸ್ಥಾಪಕ ಆನಂದ್, ಮೊಬಿಲಿಟಿ ಇಂಡಿಯಾ ಸಂಸ್ಥೆಯು ನೀಡುತ್ತಿರುವ ಪುನರ್ ವಸತಿ ಸೇವೆಗಳ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಚಾಂದ್ ಪಾಷಾ ಮಾಹಿತಿ ನೀಡಿದರು.
ಈ ಸಂದರ್ಭದ೯ಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಸಂಸ್ಥೆಯ ಸಿಬ್ಬಂದಿ ಸುಧಾಮಣಿ, ಪ್ರದೀಪ್ ಮತ್ತಿತರರು ಉಪಸ್ಥಿತರಿದ್ದರು.