ಅಂಗನವಾಡಿ ಕಾರ್ಯಕರ್ತೆಯರಿಗೆ ಕಲಿಕಾ ತರಬೇತಿ

ಸಿರುಗುಪ್ಪ, ನ.4: ನಮ್ಮ ಅಂಗನವಾಡಿ ಕೇಂದ್ರಗಳಿಗೆ ಬರುವ ಚಿಕ್ಕ ಮಕ್ಕಳಿಗೆ ಅರ್ಥವಾಗುವ ರೀತಿಯಲ್ಲಿ ಅಭಿನಯದೊಂದಿಗೆ ಶಿಶುಗೀತೆಗಳನ್ನು ಹಾಡುವ ಮೂಲಕ ಮಕ್ಕಳನ್ನು ಕಲಿಕೆಗೆ ಅನುಕೂಲವಾಗುವ ಕಾರ್ಯವನ್ನು ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತೆಯರು ಮಾಡಬೇಕೆಂದು ಮೇಲ್ವಿಚಾರಕಿ ಎ.ಎಂ.ಮಹಾದೇವಿ ತಿಳಿಸಿದರು.
ತಾಲೂಕಿನ ದರೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಕರೂರು ಹೋಬಳಿಯ ವ್ಯಾಪ್ತಿಯಲ್ಲಿ ಬರುವ ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಹಮ್ಮಿಕೊಂಡಿದ್ದ ಶಾಲಾಪೂರ್ವ ಶಿಕ್ಷಣ ಬಲವರ್ದನೆ ಮೂರನೇ ಹಂತದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ ಅಂಗನವಾಡಿ ಕೇಂದ್ರಗಳಿಗೆ ಬರುವ ಮಕ್ಕಳ ಕಲಿಕೆಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯಕರ್ತೆಯರಿಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಮೇಲ್ವಿಚಾರಕಿಯರಾದ ಗಂಗಮ್ಮ, ಹುಲಿಗೆಮ್ಮ ಮತ್ತು ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಇದ್ದರು.