ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಕುಂದು ಕೊರತೆಗೆ ಸಹಾಯವಾಣಿ ಪ್ರಾರಂಭ

ಚಿತ್ರದುರ್ಗ,ಮೇ.4: ಜಿಲ್ಲಾ ಮಟ್ಟದಲ್ಲಿ ಫಲಾನುಭವಿಗಳ ಮತ್ತು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಕುಂದು ಕೊರತೆ ನಿವಾರಿಸಲು ಚಿತ್ರದುರ್ಗ ನಗರದ ಜಿಲ್ಲಾ ಬಾಲಭವನ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದೆ.
ಜಸ್ಟೀಸ್ ಎ.ಎಸ್.ವೇಣುಗೋಪಾಲಗೌಡ ಅವರ ಅಧ್ಯಕ್ಷತೆಯ ಸಮಿತಿ ಸೂಚನೆಯನುಸಾರ ಜಿಲ್ಲಾ ಮಟ್ಟದಲ್ಲಿ ಫಲಾನುಭವಿಗಳ ಮತ್ತು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಕುಂದು ಕೊರತೆ ನಿವಾರಿಸಲು ಉಪನಿರ್ದೇಶಕರ ಕಚೇರಿಯ ದೂರವಾಣಿ ಸಂಖ್ಯೆ 08194-234579 ಸಹಾಯವಾಣಿಯಾಗಿ ಪರಿಗಣಿಸಲಾಗಿದ್ದು, ಬರುವ ದೂರುಗಳನ್ನು ದಾಖಲಿಸಿಕೊಂಡು ಪ್ರತಿ ದೂರಿನ ಬಗ್ಗೆ ಕ್ರಮವಹಿಸಿ ಸಮಿತಿಗೆ ಮಾಹಿತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.