ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥ ಪೂರೈಕೆ: ಡಿಡಿಗೆ ದೂರು

ಸಂಜೆವಾಣಿ ವಾರ್ತೆ
ಚಾಮರಾಜನಗರ ಡಿ.27:- ಜಿಲ್ಲೆಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಎಂಎಸ್ ಪಿಎಸ್ ವತಿಯಿಂದ ನೀಡುವ ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಮಕ್ಕಳ ಆರೋಗ್ಯ ಸ್ಥಿತಿ ಹದಗೆಡಲು ಕಾರಣವಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಮೂಲಭೂತ ಹಕ್ಕುಗಳ ರಕ್ಷಣೆ ಹಾಗೂ ಭ್ರμÁ್ಟಚಾರ ನಿರ್ಮೂಲನಾ ಸಮಿತಿಯ ರಾಜ್ಯದ್ಯಕ್ಷೆ ಲಕ್ಷ್ಮಿಮಹೇಶ್ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರಿಗೆ ದೂರು ನೀಡಿದರು.
ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಗೆ ತೆರಳಿ ಕಳಪೆ ದರ್ಜೆ ಆಹಾರದೊಂದಿಗೆ ದೂರು ನೀಡಿ ಮಾತನಾಡಿದ ಅವರು, ಗುಂಡ್ಲುಪೇಟೆ ತಾಲೂಕಿನಕಗ್ಗದ ಹುಂಡಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಮರ್ಪಕವಾಗಿ ನೀಡುತ್ತಿಲ್ಲ ಈ ಬಗ್ಗೆ ಕೇಳಿದರೆ ಬೇಜವಾಬ್ದಾರಿಯಿಂದ ವರ್ತಿಸುತ್ತಾರೆ, ಇದೇರೀತಿ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಜೊತೆಗೆ ಅಶುಚಿತ್ವ ಮತ್ತು ಮೂಲಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ, ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳು ಇಂತಹ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿಆಹಾರದ ಗುಣಮಟ್ಟವನ್ನು ಪರೀಕ್ಷಿಸುತ್ತಿಲ್ಲ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಅವರು ಮಾತನಾಡಿ, ಇನ್ನು ಮುಂದೆ ಆಹಾರ ಪದಾರ್ಥ ಪೂರೈಕೆ ಮಾಡುವಂತಹಅಂಗನವಾಡಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಇದೇರೀತಿಯ ಸಮಸ್ಯೆಕಂಡು ಬಂದರೆದೂರು ಸಲ್ಲಿಸಬಹುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ರಾಜಪ್ಪ ಬೆಳವಾಡಿ, ಜಿಲ್ಲಾ ಅಧ್ಯಕ್ಷ ಮಂಜುನಾಥ್ ಬೊಮ್ಮನಹಳ್ಳಿ, ತಾಲೂಕು ಅಧ್ಯಕ್ಷ ವಾಸು ಗುಂಡ್ಲುಪೇಟೆ ಇದ್ದರು.