ಅಂಗನವಾಡಿ, ಪೂರ್ವ ಪ್ರಾಥಮಿಕ ಶಾಲೆಗಳಿಗೆ ಸ್ಯಾನಿಟೈಸ್

ಕೆ.ಆರ್.ಪೇಟೆ. ನ.07:- ಇದೇ ಸೋಮವಾರದಿಂದ ಎಲ್ ಕೆ.ಜಿ. ಹಾಗೂ ಅಂಗನವಾಡಿಗಳ ಭೌತಿಕ ತರಗತಿಗಳ ಪ್ರಾರಂಭಕ್ಕೆ ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ ಇರುವ ಎಲ್ಲಾ ಅಂಗನವಾಡಿ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಸ್ಯಾನಿಟೈಸ್ ಮಾಡಿಸುವ ಕೆಲಸ ಮಾಡಲಾಯಿತು.
ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಟ್ಟಡಗಳಿಗೆ ಗ್ರಾಮ ಪಂಚಾಯಿತಿ ನೌಕರರು ಶನಿವಾರ ಸ್ಯಾನಿಟೈಸ್ ಸಿಂಪಡಿಸಿ ಎಳೆಯ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರದ ಮಾರ್ಗ ಸೂಚಿಗಳನ್ನು ಪಾಲಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.