ಅಂಗನವಾಡಿ ಬಲವರ್ಧನೆಗೆ ಕಾರ್ಯಕರ್ತೆಯರ ಶ್ರಮ ಮುಖ್ಯ

ಕೊಟ್ಟೂರು ನ 12. :ಅಂಗನವಾಡಿ ಕೇಂದ್ರಗಳ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಮುಖ್ಯವಾಗಿದೆ ಎಂದು ಹ್ಯಾಳ್ಯಾ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಶಿಧರ ಹೇಳಿದರು. ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಜಿಲ್ಲಾಡಳಿತ ಬಳ್ಳಾರಿ, ಮಹಿಳಾ ಮತ್ತು  ಮಕ್ಕಳ ಅಭಿವೃದ್ಧಿ ಇಲಾಖೆ, ಕಲಿಕೆ ಟಾಟಾ ಟ್ರಸ್ಟ್ ಇವರ ಆಶ್ರಯದಲ್ಲಿ ಮಂಗಳವಾರ ಜರುಗಿದಅಂಗನವಾಡಿ ಕಾರ್ಯಕರ್ತೆಯರ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮದಲ್ಲಿ ಮಾತನಾಡಿದರು‌.ಅಂಗನವಾಡಿ ಕೇಂದ್ರಗಳು ಮೂರು ವರ್ಷದ ಮಗುವಿನಿಂದ ಆರು ವರ್ಷಗಳವರೆಗೆ ಶಾಲಾ ಪೂರ್ವ ಶಿಕ್ಷಣ ಪಡೆಯಲು ಅರ್ಹವಾಗಿರುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಆ ಮಗುವಿಗೆ ಶಿಕ್ಷಣ ನೀಡುವ ಮೂಲಕ ಮಾನಸಿಕ, ದೈಹಿಕ, ಸಾಮಾಜಿಕ ಬೆಳವಣಿಗೆ ಶ್ರಮಿಸಬೇಕು ಎಂದು ಹೇಳಿದರು.ಸ್ವಾತಂತ್ರ, ಈರಮ್ಮ, ವಿಜಯಲಕ್ಷ್ಮೀ, ಶುಭಮೂರ್ತಿ ಸೇರಿದಂತೆ ಇತರರು ಇದ್ದರು.