
ಚಿಂಚೋಳಿ,ಆ.24- ತಾಲೂಕಿನÀ ವ್ಯಾಪ್ತಿಯಲ್ಲಿ ಬರುವ ಖಾಲಿ ಇರುವ 26 ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 39 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಮತ್ತು
ಗೌರವಧನ ಆಧಾರಿತವಾಗಿರುವ ಹುದ್ದೆಗಳಿಗೆ ಅರ್ಜಿ ಅವಾನಿಸಲಾಗಿದ್ದು, ಆಯ್ಕೆ ಸಮಿತಿಯ ಅನುಮೋದನೆ ಮೇರೆಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಛೇರಿಯ ಫಲಕದಲ್ಲಿ ದಿನಾಂಕ:24.08.2023 ರಂದು ಪ್ರಕಟಿಸಲಾಗಿದೆ. ಈ ಕುರಿತು ಯಾವುದಾದರೂ ಆಕ್ಷೇಪuಗಳು ಇದ್ದಲ್ಲಿ ಇದ್ದಲ್ಲಿ ದಿನಾಂಕ:01.09.2023 ರ ಸಾಯಂಕಾಲ 5-30 ಒಳಗಾಗಿ ಕಛೇರಿಗೆ ಭೇಟಿ ನೀಡಿ ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದ್ದು, ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಾದ ಗುರುಪ್ರಸಾದ್ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ