ಅಂಗವಿಕಲರಿಗೆ:ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ

ರಾಯಚೂರು, ಏ.೧೭- ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಜಿಲ್ಲಾ ಸ್ಲಿಪ್ ವತಿಯಿಂದ ಆಯೋಜಿಸಿದ ವಿಕಲಚೇತನರಿಗೆ ಹಾಗೂ ಹಿರಿಯ ನಾಗರೀಕರಿಗೆ ಮತದಾನ ಅರಿವು ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಅವರು ಚಾಲನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶೇಷ ಚೇತನರು, ಹಿರಿಯ ನಾಗರೀಕರು ಸೇರಿದಂತೆ ಪ್ರತಿಯೊಬ್ಬರು ಮತದಾನ ಮಾಡಬೇಕು. ಮತದಾನದಿಂದ ಯಾರು ಹೊರ ಉಳಿಯಬಾರದು.
ವಿಕಲಚೇತನರು ಹಾಗೂ ಹಿರಿಯ ನಾಗರೀಕರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಈ ಭಾರಿ ವಿಶೇಷ ಒತ್ತು ನೀಡಿದ್ದು, ಮತಗಟ್ಟೆಗೆ ತೆರಳಲು ರಾಂಪ್ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗೆ ಬರಲು ಸಾಧ್ಯವಾಗದ ಹಿರಿಯ ನಾಗರಿಕರು ಮತ್ತು ಅಂಗವಿಕಲರು ಅಂಚೆ ಮತಪತ್ರಗಳ ಮೂಲಕ ಮತದಾನ ಮಾಡಲು ಅವಕಾಶವಿದೆ ಎಂದರು.
ಈ ಸಂದರ್ಭದಲ್ಲಿ ಸಹಾಯ ಆಯುಕ್ತ ರಜಿನಿಕಾಂತ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಸುರೇಂದ್ರ ಬಾಬು
ಅಂಗವಿಕಲರು, ಹಿರಿಯ ನಾಗರೀಕರು, ದಂಡಪ್ಪ ಬಿರಾದಾರ್, ಸೇರಿದಂತೆ ಉಪಸ್ಥಿತರಿದ್ದರು.