ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 15 ದಿನದೊಳಗೆ ನೀಲನಕ್ಷೆ ಸಿದ್ಧ: ಸಚಿವ ಆನಂದಸಿಂಗ್


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಜು.14:  ಅಂಜನೇಯನ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ  ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದಸಿಂಗ್  ಹೇಳಿದ್ದಾರೆ.
ಅವರು ಹೊಸಪೇಟೆಯಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತ ಪರಿಶೀಲನಾ  ಸಭೆಯಲ್ಲಿ ಮಾತನಾಡಿದರು. ಅಂಜನಾದ್ರಿ ಬೆಟ್ಟಕ್ಕೆ ನಿತ್ಯ 5 ಸಾವಿರ, ವಾರಂತ್ಯದಲ್ಲಿ 25 ಸಾವಿರ ವಿಶೇಷ ದಿನಗಳ್ಲಿ 50 ಸಾವಿರದಷ್ಟು ಜನರು ದರ್ಶನಕ್ಕೆ ಬರುತ್ತಿದ್ದಾರೆ;ಅವರೆಲ್ಲರಿಗೂ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಕಲ್ಪಿಸಬೇಕಿದೆ.
ಶೌಚಾಲಯ,ಸ್ನಾನಗೃಹ,ಪಾರ್ಕಿಂಗ್, ಪ್ರವಾಸಿಗರ ಕೊಠಡಿ, ವಾಣಿಜ್ಯ ಮಳಿಗೆಗಳು ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ನೀಲನಕ್ಷೆ ಹೊಂದಿರಲಿದೆ. ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ 100 ಕೋಟಿ ರೂ.ಗಳು ಮೀಸಲಿಟ್ಟಿದ್ದಾರೆ, ಈ ತಿಂಗಳ‌ 20 ರೊಳಗೆ ಮುಖ್ಯಮಂತ್ರಿಯವರು ಅಂಜನಾದ್ರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಅಂಜನಾದ್ರಿ ಸಮಗ್ರ ಅಭಿವೃದ್ಧಿಪಡಿಸುವ ಉದ್ದೇಶದಿಂದ ಅಂಜನಾದ್ರಿ ಬೆಟ್ಟದ ಸುತ್ತಮುತ್ತಲಿನ 62 ಎಕರೆ ರೈತರ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಲಾಗಿದೆ‌ ಇದಕ್ಕೆ  ರೈತರು ಸಮ್ಮತಿಸಿದ್ದಾರೆ. ಪ್ರತಿ ಎಕರೆ ಜಮೀನಿಗೆ ಗರಿಷ್ಠ 42ಲಕ್ಷ ರೂ. ಪರಿಹಾರ ನೀಡಲಿದೆಂದರು.
ಭೂಸ್ವಾಧೀನಕ್ಕೆ ಸಂಬಂಧಿಸಿ  ಪ್ರಾಥಮಿಕ ಅಧಿಸೂಚನೆ ಹೊರಡಿಸುವಂತೆ  ಕೊಪ್ಪಳ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಸೂಚನೆ ನೀಡಿದರು.
 ರೋಪ್ ವೇ:
ಭಾರತ ಸರಕಾರವು ಪರ್ವತ ಮಾಲಾ ಯೋಜನೆ ಅಡಿ ರಾಜ್ಯದಲ್ಲಿ ಅಂಜನಾದ್ರಿ ಮತ್ತು ಕೊಡಚಾದ್ರಿಗೆ ರೋಪ್ ವೇ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ. ಆದರೆ ಅಂಜನಾದ್ರಿಗೆ ರಾಜ್ಯ ಸರ್ಕಾರವೇ ಪಿಪಿಪಿ ಮಾಡೆಲ್ ನಲ್ಲಿ ಮಾಡಲಿದೆಂದರು.
35 ಕಿ.ಮೀ ರಸ್ತೆ ಅಭಿವೃದ್ಧಿ: ಮುಖ್ಯಮಂತ್ರಿಯವರ  ಸೂಚನೆಯಂತೆ  ಅಂಜನಾದ್ರಿಗೆ ಸಂಪರ್ಕ ಕಲ್ಪಿಸಲು ಹಿಟ್ನಾಳ್ ಕ್ರಾಸ್‍ನಿಂದ ಗಂಗಾವತಿಯವರೆಗಿನ 35 ಕಿ.ಮೀ ಚತುಷ್ಪತ ರಸ್ತೆ ನಿರ್ಮಿಸಲು ಉದ್ದೇಶಿಸಿದ್ದು.  148 ಎಕರೆ ಭೂಸ್ವಾಧೀನ ಸೇರಿದಂತೆ ಈ ರಸ್ತೆ ನಿರ್ಮಾಣಕ್ಕೆ ಅಂದಾಜು 400 ಕೀಟಿ ರೂ ವೆಚ್ಚವಾಗಲಿದೆ. ರಸ್ತೆಯಲ್ಲಿ ಬರುವ 10 ಹಳ್ಳಿಗಳ ಹತ್ತಿರ ಮಾತ್ರ ಈಗಿರುವ ದ್ವಿಪಥದ ರಸ್ತೆಯನ್ನೇ ಬಳಸಿಕೊಳ್ಳಲಾಗುತ್ತದೆಂದು  ಹೇಳಿದ್ದಾರೆ.

Attachments area