ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಸೆ.೧೬; ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯ ವಾಚನ ಮಾಡಲಾಯಿತು.ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕು  ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಸಂವಿಧಾನ ಪೀಠಿಕೆ ವಾಚನ ಮಾಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯ್ಕ್, ವಿಷಯ ನಿರ್ವಾಹಕ ಮಲ್ಲಿಕಾರ್ಜುನ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ್, ಗಂಗಾಧರೆಡ್ಡಿ, ಕಚೇರಿ ವ್ಯವಸ್ಥಾಪಕ ಮಹಮದ್ ಅಲಿ, ಅಕೌಂಟೆಂಟ್  ಹಬೀಬ್, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿ ಕಾತ್ಯಾಯನಮ್ಮ, ಗಣಕಯಂತ್ರ ನಿರ್ವಾಹಕರಾದ ನಾಗವೇಣಿ, ಪ್ರತಿಭಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ವಾಹನ ಚಾಲಕ ರಮೇಶ್, ಕ್ಷಯರೋಗ ವಿಭಾಗದ ಸಿಬ್ಬಂದಿಗಳಾದ ಮಹೇಂದ್ರ, ಮಾರುತಿ, ಲೋಕೇಶ್, ಜಬ್ಬಾರ್ ಇತರರು ಉಪಸ್ಥಿತರಿದ್ದರು.