ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ; ಅಂಬೇಡ್ಕರ್ ಪುತ್ಥಳಿಗೆ ನಮನ


ಹೊಸಪೇಟೆ ಸೆ.16: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹೊಸಪೇಟೆ ನಗರದಲ್ಲಿರುವ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಗೌರವ ಸಲ್ಲಿಸಲಾಯಿತು.
ನಗರದಲ್ಲಿರುವ ಪಾರ್ಲಿಮೆಂಟ್ ಮಾದರಿಯಲ್ಲಿ ನಿರ್ಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್. ಅವರು ಮಾಲಾರ್ಪಣೆ ಸಲ್ಲಿಸಿ ನಮಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ ಹೆಚ್.ವಿ. ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.