ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ವಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಗೊವಿಂದರೆಡ್ಡಿ

ಬೀದರ, ಜೂ.9: ಜೂನ್ 21ರಂದು ನಡೆಯುವ 9ನೇ ಅಂತರಾಷ್ಟ್ರೀಯ ಯೋಗ ದಿನಚಾರಣೆ ಯಶಸ್ವಿಯಾಗಿ ನಿರ್ವಹಿಸಲು ಜಿಲ್ಲಾ ಆಯುಷ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಗೊವಿಂದರೆಡ್ಡಿ ಅವರು ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜೂನ್ 21ರಂದು ನಡೆಯುವ 9ನೇ ಅಂತರಾಷ್ಟ್ರೀಯ ಯೋಗ ದಿನಚಾರಣೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ನೇಹರು ಕ್ರೀಡಾಂಗಣದಲ್ಲಿ ಜೂನ್ 21ರಂದು ಯೋಗಸಾನ ಕಾರ್ಯಕ್ರಮವು ಬೆಳಿಗ್ಗೆ 6:30ಗಂಟೆಯಿಂದ 7-15ಗಂಟೆಯ ವರೆಗೆ ನಡೆಯಲ್ಲಿದ್ದು, ಸದರಿ ಕಾರ್ಯಕ್ರಮಕ್ಕೆ ಆಗಮಿಸುವವರು ಬೆಳಿಗ್ಗೆ 6 ಗಂಟೆಗೆ ಯೋಗ ಮ್ಯಾಟ್‍ದೊಂದಿಗೆ ಹಾಜರಾಗಬೇಕು. ಅಂತರಾಷ್ಟ್ರೀಯ ಯೋಗ ದಿನಚಾರಣೆ ನಿಮಿತ್ಯ ಎಲ್ಲಾ ಶಾಲಾ- ಕಾಲೇಜುಗಳು, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೊಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ|| ಆರ್.ಬಿ ಪಾಟೀಲ್, ಹಿರಿಯ ಆಯುಷ್ ವೈದ್ಯಾಧಿಕಾರಿ ಶಿವಕುಮಾರ ನೇಳಗೆ, ಕಚೇರಿ ಸಹಾಯಕ ಪ್ರಕಾಶ ಪನ್ನಾಳೆ, ರೋಟರಿ ಕ್ಲಬ್‍ನ ನಿತೀನ್ ಕರ್ಪೂರ, ಜಿಲ್ಲಾ ಸರ್ಕಾರಿ ನೌಕರ ಸಂಘದ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಆರ್ಯುವೇದ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.