ಅಂತರಾಷ್ಟ್ರೀಯ ಯೋಗ ದಿನಾಚರಣೆ

ಧಾರವಾಡ, ಜೂ.21: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆಯುಷ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ನಗರದ ಆರ್‍ಎನ್.ಶಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಯೋಗಾಭ್ಯಾಸ ಜರುಗಿತು.
ಶಾಸಕ ಎನ್.ಎಚ್.ಕೋನರಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಸಸಿಗೆ ನೀರು ಹಾಕಿ, ಸಾಮೂಹಿಕ ಯೋಗಾಭ್ಯಾಸ ಉದ್ಘಾಟಿಸಿದರು. ಧಾರವಾಡ ತಹಸಿಲ್ದಾರ ಡಾ.ಮೋಹನ ಭಸ್ನೆ, ಜಿಲ್ಲಾ ಆಯುಷ ಅಧಿಕಾರಿ ಡಾ.ಬಿ.ಪಿ.ಪೂಜಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಸರಶಟ್ಟಿ ಇದ್ದರು. ಯೋಗ ಪಟು ಜಗದೀಶ ಮಳಗಿ ಅವರು ಸಾಮೂಹಿಕ ಯೋಗಾಭ್ಯಾಸದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು.
ಸಾಮೂಹಿಕ ಯೋಗಾಭ್ಯಾಸದಲ್ಲಿ ಪತಂಜಲಿ ಸಂಸ್ಥೆಯ ಯೋಗ ಸಾಧಕರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿ, ಯೋಗ ಪ್ರದರ್ಶಿಸಿದರು.
ನಂತರ ಯೋಗ ವೇದಿಕೆಯಲ್ಲಿ ಹುಬ್ಬಳ್ಳಿ ನಗರದ ಜನತಾಬಜಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಸಾಹಿತ್ಯ ಪರಿಷತ್ ವಿದ್ಯಾರ್ಥಿಗಳಾದ ಪಲ್ಲವಿ ಚಾಕಲಬ್ಬಿ, ಸುಮನ್ ಟೊಪನ್ನವರ, ಪ್ರಿಯಾಂಕಾ, ಅರ್ಚನಾ, ಮನಿಷಾ ಅವರು ಜಾನಪದ ನೃತ್ಯ ಪ್ರದರ್ಶಿಸಿದರು. ಸಂಜೀವ ದುಮಕನಾಳ ನೃತ್ಯ ನಿರ್ದೇಶಿಸಿದರು.