ಅಂತರ್ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

 ದಾವಣಗೆರೆ.ಜ.೧೮; ದಾವಣಗೆರೆ ವಿಶ್ವವಿದ್ಯಾನಿಲಯ, ದಾವಣಗೆರೆ ಹಾಗೂ ಬಿಇಎ ಶಿಕ್ಷಣ ಮಹಾವಿದ್ಯಾಲಯ, ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ ಕಾಲೇಜು ಮಟ್ಟದ ಕ್ರಾಸ್‌ಕಂಟ್ರಿ(ಗುಡ್ಡಗಾಡು) ಓಟದ ಸ್ಪರ್ಧೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರಾದ ಅರ್ಚನಾ ಗಾಯಕವಾಡ್ ದ್ವಿತೀಯ ಸ್ಥಾನ ಮತ್ತು ಸಾನಿಯ ಸುಜೈನ್ ತೃತೀಯ ಸ್ಥಾನ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಪ್ರಾಚಾರ್ಯರರು, ಉಪ ಪ್ರಾಚಾರ್ಯರು, ಬೋಧಕರು ಅಭಿನಂದಿಸಿದ್ದಾರೆ.