ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ

ದಾವಣಗೆರೆ.ಆ.೩೧; ರಾಷ್ಟ್ರೀಯ ಕ್ರೀಡಾ ದಿನದ ಆಚರಣೆಯ ಅಂಗವಾಗಿ ನಗರದ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಅಂತರ್ ಶಾಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ  ಜಿಲ್ಲಾಧಿಕಾರಿಗಳಾದ ಡಾ. ವೆಂಕಟೇಶ್ ಎಂ.ವಿ  ಆಗಮಿಸಿದ್ದರು. ಅತಿಥಿಗಳನ್ನು ಅಮೃತ ವಿದ್ಯಾಲಯಂ ಶಾಲೆಯ ವಿದ್ಯಾರ್ಥಿನಿಯರು ತಿಲಕವಿಟ್ಟು ವೇದ ಘೋಷಗಳ ಮೂಲಕ ಸ್ವಾಗತಿಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಕ್ರೀಡೆ ಪೂರಕವಾಗಿದೆ. ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ಹೇಳಿದರು