ಅಂತರ ಧರ್ಮೀಯ ಪ್ರೇಮಕಥೆಯ `13′

ಹಿರಿಯ ಕಲಾವಿದರಾದ ರಾಘವೇಂದ್ರ ರಾಜ್‌ಕುಮಾರ್‌, ಶ್ರುತಿ ಅಭಿನಯದ  ‘13’ ಚಿತ್ರೀಕರಣ ಪೂರ್ಣಗೊಂಡಿದೆ. ರಾಘವೇಂದ್ರ ರಾಜ್‌ಕುಮಾರ್‌ ಗುಜರಿ ಅಂಗಡಿ ಮಾಲೀಕನಾಗಿ ಹಾಗು ಶೃತಿ  ಟೀ ಅಂಗಡಿ ನಡೆಸುವ ಸಾಯಿರಾಬಾನು  ಪಾತ್ರದಲ್ಲಿ  ನಟಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ನಡೆದ  ನೈಜ ಘಟನೆ ಸ್ಫೂರ್ತಿಯಿಂದ  ಚಿತ್ರಕಥೆ ಎಣೆದಿದ್ದಾರೆ ನಿರ್ದೇಶಕ ನರೇಂದ್ರ ಬಾಬು.ಚಿತ್ರಕ್ಕೆ ಸಂಪತ್‌ ಕುಮಾರ್‌, ಮಂಜುನಾಥ್‌, ಮಂಜುನಾಥಗೌಡ ಬಂಡವಾಳ ಹಾಕಿದ್ದಾರೆ.

ನಿರ್ದೇಶಕ ನರೇಂದ್ರ ಬಾಬು,ಅಂತರ ಧರ್ಮೀಯ ಪ್ರೇಮ ಕಥೆ  ಇದಾಗಿದ್ದು, ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವರೀತಿ ಕಷ್ಟಪಡುತ್ತಾರೆ ಎನ್ನುವ ಚಿತ್ರ ಇದಾಗಿದೆ.ಸಾಕಷ್ಟು ಅಡೆತಡೆಗಳ ನಡುವೆ ಚಿತ್ರ ಪೂರ್ಣಗೊಂಡಿದೆ.

ರಾಘಣ್ಣ ಅವವರನ್ನು ಈವರೆಗೆ ನೋಡಿದ್ದಕ್ಕಿಂತ ಬೇರೆಯದೇ ರೀತಿ ನೋಡಬಹುದು  ಎಂದರು. ರಾಘವೇಂದ್ರ ರಾಜ್ ಕುಮಾರ್ ಮಾತನಾಡಿ,  ’13’ ಕಥೆ  ಇದೇನಿರಬಹುದು ಅನಿಸಿತ್ತು. ಶೃತಿ ಮಾಡುತ್ತಿದ್ದಾರೆ ಅಂದಾಗ ಇಷ್ಟವಾಯ್ತು. ಚಿತ್ರೀಕರಣ ಮಾಡುವುದು ಮುಖ್ಯವಲ್ಲ, ಅದನ್ನು ಜನರಿಗೆ ತಲುಪಿಸುವುದು ಮುಖ್ಯ ಎಂದು ಹೇಳಿದರು

ನಟಿ ಶೃತಿ ಮಾತನಾಡಿ 13 ಹೆಸರು ಮಾತ್ರ ನೆಗೆಟಿವ್, ಸಿನಿಮಾ ಪೂರ್ತಿ ಪಾಸಿಟಿವ್ ಆಗಿದೆ. ಇದೇ ಮೊದಲ ಬಾರಿಗೆ ಮುಸ್ಲಿಂ ಹೆಣ್ಣು ಮಗಳ ಪಾತ್ರ ಮಾಡಿದ್ದೇನೆ. ನ ಮಾಡುವ ಪಾತ್ರ ಯಾರಿಗೂ ನೋವುಂಟು ಮಾಡಬಾರದು ಅಲ್ಲದೆ ಎಲ್ಲೋ ಸ್ವಲ್ಪ ಲೋಪದೋಷ ಆದರೂ ತಂಡಕ್ಕೆ ಅಲ್ಲದೆ ವೈಯಕ್ತಿಕವಾಗಿ ನಮಗೂ ತೊಂದರೆ ಆಗುತ್ತದೆ ಎಂಸರು.

ನಿರ್ಮಾಪಕ ಕೆ. ಸಂಪತ್‍ಕುಮಾರ್ ಮಾತನಾಡಿ. ಅಮೃತವಾಹಿನಿ ನಂತರ ಬಾಬು ಜೊತೆ ಎರಡನೇ ಚಿತ್ರ.ಮಂಜುನಾಥ್‍ಗೌಡ ಹಾಗೂ ಮಂಜುನಾಥ್ ಚಿತ್ರದ ಕುರಿತಂತೆ ಮಾತನಾಡಿದರು. ಪ್ರಮೋದ್ ಶೆಟ್ಟಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ. ಮಂಜುನಾಥ್‌ ನಾಯ್ಡು  ಛಾಯಾಗ್ರಹಣ ಹಾಗೂ ಸೋಹನ್‌ ಬಾಬು  ಸಂಗೀತವಿದೆ.