ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ


ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಇಂದು ಆಚರಿಸಲಾಗುತ್ತದೆ. ಈ ದಿನದಂದು ರಾಜಕೀಯ ಮುಖಂಡರು, ಸರ್ಕಾರಗಳು, ಕಾನೂನು ಸಂಸ್ಥೆಗಳು ಮತ್ತು ಲಾಬಿ ಗುಂಪುಗಳು ಭ್ರಷ್ಟಾಚಾರದ ವಿರುದ್ಧ ಒಟ್ಟಾಗಿ ಕೆಲಸ ಮಾಡುವ ದಿನವಾಗಿದೆ..

ಭ್ರಷ್ಟಾಚಾರವು ಎಲ್ಲಾ ಸಮಾಜಗಳಲ್ಲಿಯೂ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹಾಳುಮಾಡುತ್ತಿರುವ ಗಂಭೀರ ಅಪರಾಧವಾಗಿದೆ. ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಜನರು ಭ್ರಷ್ಟಾಚಾರವನ್ನು ಹೇಗೆ ತಡೆಯಬಹುದು ಮತ್ತು ಭ್ರಷ್ಟಾಚಾರವನ್ನು ಸಮರ್ಥವಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸುವ ಕ್ರಮಗಳನ್ನು ಬಲಪಡಿಸುವ ಸಲುವಾಗಿ ಪ್ರತಿವರ್ಷ ಡಿಸೆಂಬರ್‌ 9ರಂದು ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ.

ಡಿಸೆಂಬರ್‌ 9ರಂದು ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನಾಗಿ ಆಚರಿಸಬೇಕು ಎಂದು ವಿಶ್ವಸಂಸ್ಥೆಯಲ್ಲಿ ಅಕ್ಟೋಬರ್ 31, 2003ರಲ್ಲಿ ಪ್ರಸ್ತಾವ ಮಂಡಿಸಲಾಯಿತು. ಭ್ರಷ್ಟಾಚಾರ ವಿರುದ್ಧ ಜಾಗೃತಿ ಮತ್ತು ಅದರ ವಿರುದ್ಧ ಹೋರಾಟ ಹಾಗೂ ತಡೆ ಇದರ ಪ್ರಮುಖ ಉದ್ದೇಶವಾಗಿದೆ. 2005ರ ಬಳಿಕ ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲು ಪ್ರಾರಂಭಿಸಲಾಯಿತು.ಮ್ಲೋಂಡಿ ಕ್ಯಾಲುಜಾ ಅವರ ಜನ್ಮದಿನದಂದು ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ ಆಚರಿಸಲಾಗುತ್ತಿದೆ. ಭ್ರಷ್ಟಾಚಾರದ ಬಗ್ಗೆ ಜಾಗೃತಿ ಮೂಡಿಸಲು, ಇದನ್ನು ಎದುರಿಸಲು ಮತ್ತು ತಡೆಗಟ್ಟಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಕ್ಟೋಬರ್ 9, 2003ರಂದು ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವ ಪ್ರಾರಂಭಿಸಿತು.

ಶಿಕ್ಷ ಣ, ಆರೋಗ್ಯ, ಕ್ರೀಡೆ, ರಾಜಕೀಯ, ನ್ಯಾಯ, ದೇಶದ ಅಭಿವೃದ್ಧಿ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರ ಆಳವಾಗಿ ಬೇರೂರಿದೆ. ಇದರಿಂದ ಉಂಟಾಗುವ ಸಮಸ್ಯೆಗಳು ಗಂಭೀರವಾಗಿವೆ. ಪ್ರಜಾಪ್ರಭುತ್ವ, ಸಮಾಜದ ಭದ್ರತೆ, ನೈತಿಕ ಮೌಲ್ಯ, ನ್ಯಾಯ ಸಂಸ್ಥೆಯ ಮೌಲ್ಯಗಳನ್ನು ಭ್ರಷ್ಟಾಚಾರ ಎಂಬ ಪಿಡುಗು ದುರ್ಬಲಗೊಳಿಸುತ್ತಿದೆ. 2014ನೇ ವರ್ಷದ ವರದಿ ಪ್ರಕಾರ ಜಗತ್ತಿನ ಅತ್ಯಂತ ಭ್ರಷ್ಟಾಚಾರ ಪೀಡಿತ ರಾಷ್ಟ್ರಗಳಲ್ಲಿ ಹೈಟಿ, ಇರಾಕ್‌, ಉತ್ತರ ಕೊರಿಯ, ವೆನೆಜುವೆಲಾ, ಸೊಮಾಲಿಯಾ ಮತ್ತು ಅಫ್ಘಾನಿಸ್ತಾನ ಪ್ರಮುಖವಾಗಿದೆ. ಭಾರತವೂ ಭ್ರಷ್ಟಾಚಾರದಿಂದ ಮುಕ್ತವಾಗಿಲ್ಲ. ಭಾರತದಲ್ಲಿ ಭ್ರಷ್ಟಾಚಾರ ಮನೆ ಮಾತಾಗಿದೆ. ಇದನ್ನು ಬುಡ ಸಮೇತ ಕಿತ್ತು. ಮುಂದಿನ ಪೀಳೆಗೆಯವರಾದರೂ ಇದರ ಕಪಿಮುಷ್ಟಿಯಿಂದ ಹೊರಬೇಕೆಂಬುದು ಈ ದಿನದ ಪ್ರಮುಖ ಉದ್ದೇಶವಾಗಿದೆ.

ಪ್ರತಿವರ್ಷ 1,00,000 ಕೋಟಿ ರೂ. ಲಂಚವಾಗಿ ನೀಡಲಾಗುತ್ತಿದೆ. ಇದು ಜಾಗತಿಕ ಜಿಡಿಪಿಯ ಶೇ.5 ಕ್ಕಿಂತ ಹೆಚ್ಚು ಮೊತ್ತಕ್ಕೆ ಸಮಾನವಾಗಿರುತ್ತದೆ. ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ ಪ್ರಕಾರ, ಭ್ರಷ್ಟಾಚಾರಕ್ಕಾಗಿ ನೀಡಿದ ಹಣವನ್ನು ಅಭಿವೃದ್ಧಿಗೆ 10 ಪಟ್ಟು ಬಳಸಿಕೊಳ್ಳಬಹುದಾಗಿದೆ ಎಂದು ಅಂದಾಜಿಸಲಾಗಿದೆ.