ಅಂತಿಮ ವರ್ಷದ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಕಲಬುರಗಿ.ಏ.05: ಗುಲಬರ್ಗಾ ವಿಶ್ವವಿದ್ಯಾಲಯದ ಗೊಂದಲ ನಿರ್ಣಯಗಳಿಂದ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅನುಮತಿ ಕೊಡಬೇಕು ಎಂದು ಒತ್ತಾಯಿಸಿ ಸೋಮವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುಲಬರ್ಗಾ ವಿಶ್ವವಿದ್ಯಾಲಯದ ಕಾರ್ಯಸೌಧದ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.
ಪ್ರತಿಭಟನೆಕಾರರು ನಂತರ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ್ ಅಗಸರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ಖಾಸಗಿ ವಿಶ್ವವಿದ್ಯಾಲಯಗಳು ಆಧುನಿಕ ತಂತ್ರಜ್ಞಾನದೋಂದಿಗೆ ತಲೆ ಎತ್ತಿರುವ ಈ ಸಂದರ್ಭದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯಗಳು ಮೂಲಭೂತ ಸೌಕರ್ಯಗಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗುಲಬರ್ಗಾ ವಿಶ್ವವಿದ್ಯಾಲಯವು ಇತ್ತೀಚೆಗೆ ಹೊರಡಿಸಲಾದ ಸುತ್ತೊಲೆಯೆಲ್ಲಿ ಪ್ರಥಮ ಸೆಮಿಸ್ಟರ್ ಹಾಗೂ ದ್ವಿತೀಯ ಸೆಮಿಸ್ಟರ್ ಉತ್ತೀರ್ಣರಾದಲ್ಲಿ ಮಾತ್ರ 5ನೇ ಹಾಗೂ 6ನೇ ಸೇಮಿಸ್ಟರ್ ಪರಿಕ್ಷೆಗೆ ಅನುಮತಿ ನಿಡಲಾಗುವುದು ಎಂದು ತಿಳಿಸಲಾಗಿದೆ. ಆದಾಗ್ಯೂ, ಈಗಾಗಲೇ ವಿದ್ಯಾರ್ಥಿಗಳಿಗೆ ಅಂತಿಮ ವರ್ಷದ ಪ್ರವೇಶಾತಿ ನೀಡಲಾಗಿದೆ. ಈಗಾಗಲೆ ಆಂತರಿಕ ಪರೀಕ್ಷೆ, ಲ್ಯಾಬ್ ಪರೀಕ್ಷೆ ಕೂಡ ಬರೆದಿದ್ದಾರೆ, ಇನ್ನೆನು ಕೆಲವೇ ದಿನಗಳಲ್ಲಿ ನಡೆಯುವ ಎಕ್ಸಟರನಲ್ ಪರೀಕ್ಷೆ ಬರೆಯಲು ಕೆಲ ವಿದ್ಯಾರ್ಥಿಗಳು ಈಗಾಗಲೆ ಪರೀಕ್ಷೆ ಶುಲ್ಕವನ್ನೂ ಭರಿಸಿದ್ದಾರೆ. ವಿಶ್ವವಿದ್ಯಾಲಯವು ಯಾವುದೇ ಮುನ್ಸೂಚನೆ ನೀಡದೇ ಪರೀಕ್ಷೆ ಬರೆಯಲು ಅನುಮತಿ ನೀಡಲಾಗದು ಎನ್ನುವ ಸುತ್ತೊಲೆ ಹೊರಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ, ಅತಂಕ ಮುಡಿಸಿದ್ದು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ತಕ್ಷಣ ವಿಷಯವನ್ನು ಗಂಬೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡವಂತಾಗಬೇಕು ಎಂದು ಅವರು ಒತ್ತಾಯಿಸಿದರು.
ಆನ್‍ಲೈನ್ ವಿದ್ಯಾರ್ಥಿಗಳು ಪೋರ್ಟಲ್ ವಿನಾಕಾರಣ ಬ್ಲಾಕ್ ಮಾಡಲಾಗಿದ್ದು, ತಕ್ಷಣ ಅದನ್ನು ಓಪನ್ ಮಾಡಿಸುವಂತೆ ಆಗ್ರಹಿಸಿದ ಅವರು, ಪ್ರತಿ ಸಾರಿ ವಿಶ್ವವಿದ್ಯಾಲಯದಲ್ಲಿ ವಿನಕಾರಣ ಕೆಲ ವಿದ್ಯಾರ್ಥಿಗಳ ಫಲಿತಾಂಶ ತಡೆಹಿಡಿಯಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಪರದಾಡುವಂತಾಗುತ್ತಿದೆ, ಅಲ್ಲದೇ ನೇರವಾಗಿ ವಿಶ್ವವಿದ್ಯಾಲಯಕ್ಕೆ ಹೋಗಿ ಹಣ ಕೊಟ್ಟಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎನ್ನುವ ಭ್ರಷ್ಟಚಾರದ ಅರೋಪವಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ವಿಶ್ವವಿದ್ಯಾಲಯದಲ್ಲಿ 189 ಬೋಧಕರು ಮತ್ತು 486 ಬೋಧಕೇತರ ಹುದ್ದೆಗಳು ಸೇರಿ 675 ಖಾಲಿ ಹುದ್ದೆಗಳಿದ್ದು, ಕೂಡಲೇ ಭರ್ತಿ ಮಾಡುವಂತೆ ಒತ್ತಾಯಿಸಿದ ಅವರು, ಅಂಕಪಟ್ಟಿ ಟೆಂಡರ್ ಅವ್ಯವಹಾದಲ್ಲಿ ಭಾಗಿಯಾದವರನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆ, ಸಂಶೋಧನಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ವಿತರಿಸುವಂತೆ ಒತ್ತಾಯಿಸಿದರು.
ಬೇಡಿಕೆಗಳಿಗೆ ಸ್ಪಂದಿಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ರೂಪಿಸಲಾಗುತ್ತದೆ ಎಂದು ಅವರು ಎಚ್ಚರಿಸಿದರು.
ನಗರದ ಅಂಬೇಡ್ಕರ್ ವೃತ್ತದಿಂದ ಎಬಿವಿಪಿ ವಿಭಾಗೀಯ ಸಂಚಾಲಕ ನಾಗರಾಜ್ ಬಟಗೇರಾ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜಶೇಖರ್ ಭಾವಿಮನಿ, ಮಾಧ್ಯಮ ಪ್ರಮುಖ ಅರುಣಕುಮಾರ್, ಸಿದ್ಧರಾಮ್, ಲಕ್ಷ್ಮಪುತ್ರ, ಹಣಮಯ್ಯ, ಶಶಿ ಪಾಟೀಲ್, ಶಾಮರಾವ್, ರವಿಕುಮಾರ್, ರಾಜಕುಮಾರ್, ಪರಮಾನಂದ್, ಶಿವಕುಮಾರ್, ಅಮನ್ ಮುಂತಾದವರು ಪಾಲ್ಗೊಂಡಿದ್ದರು.