ಬೆಂಗಳೂರು,ಮೇ.೨೯- ಕನ್ನಡ ಚಿತ್ರರಂಗದಲ್ಲಿ ಕರ್ಣ ಎಂದೇ ಗುರುತಿಸಿಕೊಂಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಇಂದು ೭೧ನೇ ಹುಟ್ಟು ಹಬ್ಬದ ಸಂಭ್ರಮ.
ಅಂಬರೀಶ್ ದೈಹಿಕವಾಗಿ ಇಲ್ಲದಿದ್ದರೂ ಅವರು ತಾವು ಮಾಡಿದ ಕೆಲಸಗಳ ಮೂಲಕ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಅಭಿಮಾನಿಗಳು ತಮ್ಮ ಹುಟ್ಟುಹಬ್ಬಕ್ಕಿಂತ ಮಿಗಿಲಾಗಿ ಆಚರಿಸಿ ಸಂಭ್ರಮಿಸುತ್ತಿದ್ದಾರೆ.
ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಸಮಾಧಿಗೆ ಅಭಿಮಾನಿಗಳು ಕುಟುಂಬದ ಸದಸ್ಯರು ಮತ್ತು ಆಪ್ತರು ಪೂಜೆ ಸಲ್ಲಿಸುವ ಮೂಲಕ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ.
ಪ್ರತಿ ಬಾರಿ ಹುಟ್ಟು ಹಬ್ಬಕ್ಕೆ ಅಂಬರೀಶ್ ಅವರು ತಮ್ಮ ಅಭಿಮಾನಿಗಳಿಗಾಗಿಯೇ ಹುಟ್ಟು ಹಬ್ಬದ ದಿನವನ್ನು ಮೀಸಲಿಡುತ್ತಿದ್ದರು. ಮಂಡ್ಯ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುತ್ತಿದ್ದ ಅಭಿಮಾನಿಗಳು ಹುಟ್ಟು ಹಬ್ಬದ ದಿನ ತಮ್ಮ ನೆಚ್ಚಿನ ನಾಯಕ ನಟನಿಗೆ ಶುಭ ಕೋರಿ ಅರಸುತಿದ್ದರು.
ಆದರೆ ಕಳೆದ ನಾಲ್ಕೈದು ವರ್ಷಗಳಿಂದ ಅಭಿಮಾನಿಗಳಿಗೆ ಈ ರೀತಿಯ ಅವಕಾಶ ಕಳೆದುಹೋಗಿದೆ ಆದರೂ ತಮ್ಮ ನೆಚ್ಚಿನ ನಟನನ್ನು ಆರಾಧಿಸುವ ಪ್ರೀತಿಸುವುದನ್ನು ಮಾತ್ರ ನಿಲ್ಲಿಸಿಲ್ಲ ತಮ್ಮ ಹೃದಯದಲ್ಲಿ ಅಂಬರೀಶ್ ಅವರನ್ನು ಇಟ್ಟುಕೊಂಡು ಪೂಜಿಸುವ ಅಭಿಮಾನಗಳು ಎಂದಿಗೂ ಇದ್ದಾರೆ ಎನ್ನುವುದು ಅಂಬರೀಶ್ ಅವರ ಜನಪ್ರಿಯತೆಗೆ ಇದು ಸಾಕ್ಷಿಯಾಗಿದೆ.
ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಸಮಾಧಿ ಆವರಣದಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತಮ್ಮ ನೆಚ್ಚಿನ ನಟನಿಗೆ ಹುಟ್ಟು ಹಬ್ಬದ ಶುಭ ಕೋರಿ ಅಭಿಮಾನಿಗಳು ಪುನೀತ ರಾಗಿದ್ದಾರೆ