ಅಂಬಾಲಾದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧ

ನವದೆಹಲಿ, ಅ.೩೦: ಅಂಬಾಲಾ ನಗರ ವ್ಯಾಪ್ತಿಯಲ್ಲಿ ನ.೧ರಿಂದ ಏಕ-ಬಳಕೆಯ ಪ್ಲಾಸ್ಟಿಕ್ ಮತ್ತು ಪಾಲಿಥೀನ್ ಚೀಲಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ವಾಣಿಜ್ಯ ಕೇಂದ್ರ ಮತ್ತು ಸಣ್ಣಪುಟ್ಟ ಅಂಗಡಿಗಳಲ್ಲಿ ಸಣ್ಣ ಪ್ರಮಾಣದ ಗುಣಮಟ್ಟ ಇಲ್ಲದ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ಅಂಬಾಲಾ ಜಿಲ್ಲಾಡಳಿತ ಆದೇಶ ಹೊಡಿಸಿದೆ.
ಅಂಬಾಲಾವನ್ನು ರಾಜ್ಯದ ಮೊದಲ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಈ ನಿಷೇಧ ಹೇರಲಾಗಿದ್ದು, ಈಗಾಗಲೇ ಜಿಲ್ಲಾಡಳಿತವು ಬಟ್ಟೆ ಮತ್ತು ಸೆಣಬಿನ ಚೀಲಗಳ ಉಚಿತವಾಗಿ ವಿತರಣೆ ಮಾಡುವ ಮೂಲಕ ಜಾಗೃತಿ ಮೂಡಿಸಿದೆ.
ಹಿಂದಿನ ವಾರ್ಷಿಕ ಸಾಲಿನಲ್ಲಿ ಅಂಬಾಲಾ ಜಿಲ್ಲಾಧಿಕಾರಿ ಅಶೋಕ್ ಕುಮಾರ್ ಶರ್ಮಾ ಅವರು, ೧ ಕೆಜಿ ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ೧ ಕೆಜಿ ಅಕ್ಕಿ ವಿತರಿಸುವ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.
ನ.೧ರಿಂದ ಅಂಗಡಿ ಮಾಲೀಕರು ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ಮಾರಾಟಕ್ಕೆ ಮುಂದಾದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳುವ ಜತೆಗೆ, ದಂಡವನ್ನು ವಿಧಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.