ಅಂಬೇಡ್ಕರ್‌ಗೆ ಪುತ್ಥಳಿಗೆ ಮಾಲಾರ್ಪಣೆ

ಕೋಲಾರ,ನ.೨೭: ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನಗರದ ಬಂಗಾರಪೇಟೆ ವೃತ್ತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಗೌರವಾಧ್ಯಕ್ಷ ಎಂ.ರವಿಕುಮಾರ್ ಕೋಲಾರ ಜಿಲ್ಲಾ ಅಧ್ಯಕ್ಷ ಆಲೇರಿ ಮುನಿರಾಜು, ಗೌರವಾಧ್ಯಕ್ಷ ಗುರುಸ್ವಾಮಿ, ಕಾರ್ಯಾಧ್ಯಕ್ಷ ಡಿ ಎನ್.ಆಂಜನಪ್ಪ, ಪ್ರಧಾನ ಕಾರ್ಯದರ್ಶಿ ಎನ್.ತಿರುಮಳಪ್ಪ, ಕಾರ್ಯದರ್ಶಿ ಎನ್.ದೇವರಾಜ್ ಉಪಾಧ್ಯಕ್ಷ ವೆಂಕಟೇಶಪ್ಪ, ಮಹಿಳಾ ಘಟಕ ಅಧ್ಯಕ್ಷೆ ಮಂಜುಳಮ್ಮ, ತಾಲೂಕು ಯುವ ಘಟಕ ಅಧ್ಯಕ್ಷ ಮಂಜುನಾಥ್, ತಾಲೂಕು ಪ್ರಧಾನ ಕಾರ್ಯದರ್ಶಿ ಎಚ್.ಎನ್.ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷ ಅಶ್ವಥ್, ಅರುಣ್ ಕುಮಾರ್, ಯಶ್ವಂತ್ ಕುಮಾರ್ ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.