ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಅಧಿಕಾರ ಸ್ವೀಕಾರ

ತುಮಕೂರು, ಜು. ೨೭- ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ (ಪ್ರಭಾರ)ರಾಗಿ ರೇಷ್ಮೆ ಇಲಾಖೆ ಉಪನಿರ್ದೇಶಕ ವೈ.ಕೆ.ಬಾಲಕೃಷ್ಣಪ್ಪ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ವ್ಯವಸ್ಥಾಪಕ(ಪ್ರಭಾರ)ರಾಗಿದ್ದ ವೈ.ಕೆ.ಬಾಲಕೃಷ್ಣಪ್ಪ ಕೆಲ ದಿನಗಳ ಹಿಂದೆ ಸುಬ್ರಮಣ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಆಡಳಿತ ಮತ್ತು ಸಾರ್ವಜನಿಕ ಹಿತದೃಷ್ಠಿಯಿಂದ ವೈ.ಕೆ.ಬಾಲಕೃಷ್ಣಪ್ಪ ಅವರನ್ನು ಜಿಲ್ಲಾ ವ್ಯವಸ್ಥಾಪಕರಾಗಿ ಮುಂದುವರೆಸುವಂತೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದರು.
ಜಿಲ್ಲಾ ವ್ಯವಸ್ಥಾಪಕರಾಗಿ ಅಧಿಕಾರ ಸ್ವೀಕರಿಸಿದ್ದ ಸುಬ್ರಮಣ್ಯ ಅವರನ್ನು ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದು, ಪ್ರಭಾರ ಜಿಲ್ಲಾ ವ್ಯವಸ್ಥಾಪಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.