ಅಂಬೇಡ್ಕರ್ ಅವರ ಆದರ್ಶ ಅಳವಡಿಸಿಕೊಳ್ಳಿ : ಶಾಸಕ ಪರಣ್ಣ ಮುನವಳ್ಳಿ

ಗಂಗಾವತಿ 16 : ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್ ಜಗತ್ತಿನ ಶ್ರೇಷ್ಠ ದಾರ್ಶನಿಕರಲ್ಲಿ ಒಬ್ಬರು, ಅವರ ರಾಷ್ಟ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ನಗರದ ಐಎಂಎ ಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಡಿದ ಮಹಾನ್ ಚೇತನ. ದೇಶದಲ್ಲಿರುವ ಅಸಮಾನತೆ ನಿರ್ಮೂಲನೆ ಮಾಡಬೇಕು ಎಂದು ಅವರು ಪಣ ತೊಟ್ಟಿದ್ದರು ಎಂದರು.
ಅಂಬೇಡ್ಕರ್ ಅವರು ಬೋಧಿಸಿದ ತತ್ವ, ಸಿದ್ದಾಂತ ಮತ್ತು ಅವರ ಜೀವನ ಆದರ್ಶಗಳನ್ನು ಎಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ‌ ನೀಡಿದರು.
ಉಪನ್ಯಾಸಕ ರಮೇಶ ಗಬ್ಬೂರ್ ಹಾಗೂ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗರಾಜ್, ತಾ.ಪಂ.ಇಒ ಡಾ.ಮೋಹನ, ನಗರಸಭೆ ಪೌರಾಯುಕ್ತ ಅರವಿಂದ್ ಜಮಖಂಡಿ, ಬಿಇಒ ಸೋಮಶೇಖರ್ ಗೌಡ, ಸಿಡಿಪಿಒ ಗಂಗಪ್ಪ, ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್ ರಫಿ ಹಾಗೂ ಅಧಿಕಾರಿಗಳು ಇದ್ದರು.