ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆ

ಹೊಸಪೇಟೆ ಮಾ 24 ; ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ನಗರದ ತಹಸೀಲ್ದಾರ್ ಕಚೇರಿಯ ಮೇಲ್ಬಾಗದಲ್ಲಿರುವ ಪತ್ರಿಕಾಭವನದಲ್ಲಿ ತಹಸೀಲ್ದಾರ್ ವಿಶ್ವನಾಥ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಿನ್ನೆ ಜರುಗಿತು.
ಕೋವಿಡ್ ನಿಯಮಗಳನ್ನು ಯಾವುದೇ ರೀತಿಯಲ್ಲಿ ಉಲ್ಲಂಘನೆಯಾಗದಂತೆ ಅವುಗಳನ್ನು ಪಾಲಿಸಿಕೊಂಡು ಏ.05 ರಂದು ಬಾಬು ಜಗಜೀವನ್ ರಾಂ ರವರ ಜಯಂತಿ ಹಾಗೂ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಗುವುದು. ಇದಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಹಸೀಲ್ದಾರ್ ವಿಶ್ವನಾಥ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತರಾದ ಮನಸೂರ್ ಅಲಿ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುನಂದ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ,ತಾಲೂಕು ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಎಂ.ಸಿ.ವೀರಸ್ವಾಮಿ ಮತ್ತು ಸಂಘದ ಪದಾಧಿಕಾರಿಗಳು, ಬಾಬುಜಗಜೀವನ್ ರಾಂ ಸಂಘದ ಅಧ್ಯಕ್ಷ ಮೆಶಾಕ ಆಂಕಾಳಿ ಮತ್ತು ಸಂಘದ ಪದಾಧಿಕಾರಿಗಳು ಸೇರಿದಂತೆ ಪ್ರಗತಿಪರ ಸಂಘಟನೆಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿಗಳ ಪದಾಧಿಕಾರಿಗಳು, ಸಮಾಜ ಸೇವಕರುಗಳು,ಸಮಾಜ ಚಿಂತಕರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.