ಅಂಬೇಡ್ಕರ್ ಜಯಂತಿ ಆಚರಣೆ

ಕೋಲಾರ,ಮೇ,೩೦- ಗ್ರಾಮೀಣ ಪ್ರದೇಶದ ಯುವಕರು ವಿದ್ಯಾವಂತರಾಗಿ ಸ್ವಯಂ ಉದ್ಯೋಗ ಹುಡಕಿಕೊಂಡು ಉತ್ತಮ ಜೀವನ ನಿರ್ವಹಿಸಬೇಕು. ಚುನಾವಣೆಗಳಲ್ಲಿ ವಿವಿಧ ರಾಜಕೀಯ ಪಕ್ಷಗಳಿಗೆ ಮತ ನೀಡಲು ಹಣ ಕೇಳುವುದು ಮತ್ತು ಹಣ ಕೊಡುವುದು ಸಹ ಅಪರಾಧ ಎಂಬುದನ್ನು ಮತದಾರರು ಮನಗಾಣಬೇಕೆಂದು ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ವಕೀಲ ಕೆಂಬೋಡಿ ಕೆ.ಎನ್.ನಾರಾಯಣಸ್ವಾಮಿ ತಿಳಿಸಿದರು,
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಅರಿಮಾನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು,
ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ವಕೀಲ ಸುರೇಶ್ ಅವರು ಸಂವಿಧಾನದ ಹಕ್ಕುಗಳ ಬಗ್ಗೆ ತಿಳಿಸಿಕೊಟ್ಟರು.
ಅರಿಮಾನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಜೋತಿಷಿ ಮಾತನಾಡಿ, ಶಿಕ್ಷಣ, ಸಂಘಟನೆ, ಹೋರಾಟ ದಲಿತರ ಮೂಲಭೂತ ಹಕ್ಕುಗಳಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ವೆಂಕಟೇಶ್, ಬಾಲು, ಆರ್.ಗೋವಿಂದರಾಜು, ಆರ್.ಮಂಜುನಾಥ್ ಉಪಸ್ಥಿತರಿದ್ದರು. ಎನ್.ಸಿ.ಸಿ ಮತ್ತು ಎ.ಎಸ್.ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದು, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದವರಿಗೆ ಬಹುಮಾನ ವಿತರಿಸಲಾಯಿತು.