ಅಂಬೇಡ್ಕರ್ ಜಯಂತಿ ಆಚರಣೆ

ಕೆ.ಆರ್.ಪುರ, ಏ.೧೫- ಸಮಾನತೆಯ ಹಾದಿಯನ್ನು ತೋರಿಸಿದ ಮತ್ತು ಸಹೋದರತ್ವದ ಗುರಿಯತ್ತ ನಮ್ಮನ್ನು ಮುನ್ನಡೆಸಿದ ಮಹಾನ್ ಶಕ್ತಿ ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಎಂದು ಪಿವಿಸಿ ಬೆಂಗಳೂರು ವಿಭಾಗಿಯ ಅಧ್ಯಕ್ಷ ಆದೂರು ಕೆ. ದೇವರಾಜ್ ಹೇಳಿದರು.
ಮಹದೇವಪುರ ಕ್ಷೇತ್ರದ ಬಿದರಹಳ್ಳಿಯ ಆದೂರು ಗ್ರಾಮದಲ್ಲಿ ಪ್ರಜಾ ವಿಮೋಚನ ಚಳುವಳಿವತಿಯಿಂದ ಆಯೋಜಿಸಿದ ಸಂವಿಧಾನ ಶಿಲ್ಪಿ’ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಭಾಗಿಯಾಗಿ ಮಾತನಾಡಿದರು.
ಅಂಬೇಡ್ಕರ್ ಅವರು ಪ್ರತಿಪಾದಿಸಿದ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂಬ ಭರವಸೆಯನ್ನು ನಾವು ನೀಡೋಣ ಎಂದರು.
ಅಂಬೇಡ್ಕರ್ ನಮ್ಮ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಪ್ರಮುಖರು. ಅವರ ಆದರ್ಶ, ತತ್ವ ಸಿದ್ದಾಂತಗಳು ನಮಗೆ ಸದಾ ಸ್ಪೂರ್ತಿದಾಯಕ ಎಂದು ನುಡಿದರು.
ಬೆಂಗಳೂರು ಪೂರ್ವ ತಾಲ್ಲೂಕು ಅಧ್ಯಕ್ಷ ಗಣೇಶ್, ಚಂದ್ರಶೇಖರ್, ವೆಂಕಟೇಶ್, ಪಣತೂರ್ ವೆಂಕಟೇಶ್, ಮಂಜುನಾಥ್, ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.