ಅಂಬೇಡ್ಕರ್ ಜಯಂತಿ ಆಚರಣೆ

ಕೆ.ಆರ್. ಪುರ,ಏ.೧೪- ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯಒದಗಿಸಲು ಮಹಾನ್ ಹೋರಾಟ ನಡೆಸಿದ ದೇಶದ ಮಹಾನಾಯಕ ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಎಂದು ತಹಶೀಲ್ದಾರ್ ಅಜೀತ್ ಕುಮಾರ್ ರೈ ಅವರು ತಿಳಿಸಿದರು.
ಬೆಂಗಳೂರು ಪೂರ್ವ ತಾಲ್ಲೂಕಿನ ಕಚೇರಿ ಆವರಣದಲ್ಲಿ ಆಯೋಜಿಸಿದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ೧೩೨ನೇ ಜಯಂತಿ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಅವರು ದೇಶಕ್ಕೆ ಸಂವಿಧಾನವನ್ನು ನೀಡಿದ ಸಮಿತಿಯ ಅಧ್ಯಕ್ಷರಾಗಿ, ಸಮಾಜಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಇತಿಹಾಸಕಾರರಾಗಿ ಹೀಗೆ ಅವರಿಗೆ ತಿಳಿಯದ ಕ್ಷೇತ್ರವಿರಲಿಲ್ಲ ಎಂದು ನುಡಿದರು. ಹಿಂದುಳಿದವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಎಲ್ಲರ ಜೊತೆಗೆ ಕರೆದೊಯ್ಯುವ ಉದ್ದೇಶ ಅವರದಾಗಿತ್ತು ಎಂದರು.ಭಗವಾನ್ ಮಹಾವೀರರು ಹಿಂಸಾ ಮಾರ್ಗವನ್ನು ತೊರೆದು ಅಹಿಂಸಾ ಮಾರ್ಗದಲ್ಲಿ ನಡೆಯುವಂತೆ ಜನರಿಗೆ ತಿಳಿಹೇಳುತ್ತಿದ್ದರು.
ಡಾ. ಅಂಬೇಡ್ಕರ್ ಕೂಡ ಇದೇ ಹಾದಿಯಲ್ಲಿ ನಡೆದಿದ್ದರು. ಬದುಕಬೇಕು ಮತ್ತು ಎಲ್ಲರನ್ನೂ ಬದುಕಲು ಬಿಡಬೇಕು ಎಂಬುದೇ ಈ ಇಬ್ಬರೂ ಮಹಾತ್ಮರ ಧ್ಯೇಯವಾಗಿತ್ತು. ಇದನ್ನು ನಾವೆಲ್ಲರೂ ತಮ್ಮ ಜೀವನದಲ್ಲಿ ಅಳವಡಸಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಮಾಜಿ ಪಾಲಿಕೆ ಸದಸ್ಯರಾದ ಜಯಪ್ರಕಾಶ್, ಶ್ರಿಕಾಂತ್,ಸುಗುಮಾರ್,ಮುಖಂಡರಾದ ಎಂಎಲ್ ಡಿಸಿ ಮುನಿರಾಜು, ಎಂ.ಆರ್.ವೆಂಕಟೇಶ್, ಗಂಗನಬೀಡು ವೆಂಕಟಸ್ವಾಮಿ,ಪ್ರಶಾಂತ್ ಇದ್ದರು.