ಅಂಬೇಡ್ಕರ್ ಜಯಂತಿ: ಪರವಾನಿಗೆ ಒತ್ತಾಯ

ರಾಯಚೂರು, ಏ.೧೦- ಏ.೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ ಪರವಾನಿಗೆ ನೀಡುವಂತೆ ನೀಡುವಂತೆ ಡಾ.ಬಿ ಆರ್ ಅಂಬೇಡ್ಕರ್ ಯುವಕ ಸಮತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು. ನಗರದ ಮಡ್ಡಿಪೇಟೆ ಅಂಬೇಡ್ಕರ್ ಸಮುದಾಯದ ಭವನದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ನಡೆಸಲಾಗುವುದು. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ವೇಳೆ ದ್ವನಿ ವರ್ಧಕಗಳನ್ನು ಅಳವಡಿಸಿ ಕಲಾ ತಂಡಗಳ ಮೂಲಕ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುವುದು. ಮೆರವಣಿಗೆಯಲ್ಲಿ ಸುಮಾರು ೨ ಸಾವಿರ ಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದ್ದು ಆದಕಾರಣ ಅಂಬೇಡ್ಕರ್ ಜಯಂತಿಗೆ ಅನುಮತಿ ನೀಡುವಂತೆ ಮನವಿ ಮಾಡಿದರು.ಈ ಮೆರವಣಿಗೆ ಶಾಂತಪೂರ್ವಕವಾಗಿ ನಡೆಸಲಾಗುವುದು ಆದಕಾರಣ ಪರವಾನಿಗೆ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿ. ಶ್ರೀನಿವಾಸ್, ಜಿ. ಮಧುಕಾಂತ್, ಪವನ್ ಸಂಘದ ಸದಸ್ಯರು ಸೇರಿದಂತೆ ಉಪಸ್ಥಿತರಿದ್ದರು