ಅಂಬೇಡ್ಕರ್ ಜಯಂತಿ: ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಕಲಬುರಗಿ:ಎ.13: ಏ. 14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಇರುವ ಪ್ರಯುಕ್ತ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ನಗರದ ಮಾಂಸ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ ಹಾಗೂ ಕಸಾಯಿ ಖಾನೆ ಮಾಲೀಕರು ಸದರಿ ದಿನಾಂಕದಂದು ಯಾವುದೇ ರೀತಿಯ ಪ್ರಾಣಿ ವಧೆ ಮಾಡುವುದು ಅಥವಾ ಮಾಂಸ ಮಾರಾಟ ಮಾಡುವುದು ನಿಷೇಧಿಸಲಾಗಿದೆ ಎಂದು ಅವರು ಹೇಳಿಕೆಯಲ್ಲಿ ಸೂಚಿಸಿದ್ದಾರೆ.
ಒಂದು ವೇಳೆ ಆದೇಶ ಉಲ್ಲಂಘಿಸಿದಲ್ಲಿ ಕೆಎಂಸಿ. ಕಾಯ್ದೆ 1976 ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.