ಅಂಬೇಡ್ಕರ್ ತತ್ವ ಸಿದ್ಧಾಂತ ಅಳವಡಿಸಿಕೊಳ್ಳಲು ಕರೆ


ಸಂಜೆವಾಣಿ ವಾರ್ತೆ
ಸಂಡೂರು;ಏ: 15: ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬ ಪ್ರಜೆಯು ಅಳವಡಿಸಿಕೊಂಡಾಗ ಈ ದೇಶ ಪೂರ್ಣ ಪ್ರಮಾಣದಲ್ಲಿ ಸಮಾನತೆ ಹಾಗೂ ಪ್ರಗತಿಯನ್ನು ಸಾಧಿಸಲು ಸಾಧ್ಯ, ಇಂದು ಅವರು ರಚಿಸಿದ ಸಂವಿಧಾನವನ್ನು ನಾವೆಲ್ಲರೂ ಒಪ್ಪಿ ಅವರ ಸಂಪಾದಿಸಿದ ಜ್ಞಾನವನ್ನು ನಾವೆಲ್ಲರೂ ಬಳಸಿಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗೋಣ ಎಂದು ತಹಶೀಲ್ದಾರ್ ಗುರುಬಸವರಾಜ ತಿಳಿಸಿದರು.
ಅವರು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸರಳವಾಗಿ ಡಾ. ಬಿ.ಅರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಅವರು ಮಾತನಾಡಿ ಅಂಬೇಡ್ಕರ್ ಕೊಟ್ಟ ಸಂವಿಧಾನ ಪ್ರಜಾಪ್ರಭುತ್ವದ ಭದ್ರ ಬುನಾದಿ, ಇಂದು ಚುನಾವಣೆಯ ಸಂದರ್ಭವಾಗಿದ್ದು ಸರಳವಾಗಿ ಆಚರಿಸುತ್ತಿದ್ದೇವೆ, ಅದರೆ ಅವರು ಕೊಟ್ಟ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಸಹ ಕಡ್ಡಾಯವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಭದ್ರಪಡಿಸಬೇಕು, ತಮಗೆ ಬೇಕಾದ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಕರೆನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿಯ ಎಲ್ಲಾ ಸಿಬ್ಬಂದಿಗಳು ಗಣ್ಯರು, ವಿವಿಧ ಸಂಘಟನೆಗಳ ಪ್ರತಿನಿಧಗಳು, ಶಿರಸ್ತೆದಾರ ಶಿವಕುಮಾರ ಇತರರು ಮಾತನಾಡಿದರು.