ಅಂಬೇಡ್ಕರ್ ಪುತ್ಥಳಿಗೆ ಅವಮಾನ ಖಂಡನೆ: ಕಿಡಿಗೇಡಿಗಳ ಪತ್ತೆಗೆ ಶಾಸಕ ಅಲ್ಲಮಪ್ರಭು ಆಗ್ರಹ

ಕಲಬುರಗಿ:ಜ.23: ನಗರದ ಹೊರವಲಯದಲ್ಲಿನ ಕೋಟನೂರ್(ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ್ದು ಖಂಡನಾರ್ಹ. ಪೋಲಿಸರು ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಬೇಕು ಎಂದು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಒತ್ತಾಯಿಸಿದ್ದಾರೆ.
ಪೆÇಲೀಸರು ಸಂಪೂರ್ಣ ತನಿಖೆ ನಡೆಸಿ, ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ಪ್ರಕಾರ ಶಿಕ್ಷೆಗೊಳಪಡಿಸಬೇಕು. ಅಂಬೇಡ್ಕರ್ ಪುತ್ಥಳಿಗೆ ಮಾಡುವ ಅಪಮಾನ ಇಡೀ ನಾಗರಿಕ ಸಮಾಜಕ್ಕೆ ಮಾಡುವ ಅಪಮಾನವಾದಂತೆ. ಇಂತಹ ಅನಾಗರಿಕ ಪ್ರವೃತ್ತಿಯನ್ನು ನಾವು ಎಲ್ಲರೂ ಸೇರಿಕೊಂಡು ಖಂಡಿಸಲೇಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಾನೂನಿನ ಅಡಿ ಶಿಕ್ಷೆಯನ್ನು ವಿಧಿಸುವಂತೆ ಒತ್ತಾಯಿಸಿದ ಅವರು, ಸಾರ್ವಜನಿಕರು ಶಾಂತಿ, ಸಂಯಮತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕೋರಿದ್ದಾರೆ.