ಅಂಬೇಡ್ಕರ್ ಪುತ್ಥಳಿಗೆ ಶಿಕ್ಷಕರ ಸಂಘ ಮಾಲಾರ್ಪಣೆ

ಕೋಲಾರ,ಡಿ.೭: ಡಾ.ಬಿ.ಆರ್.ಅಂಬೇಡ್ಕರ್ರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಕೋಲಾರದ ನಚಿಕೇತ ನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಪುತಳಿಗೆ ಎಸ್ಸಿ.ಎಸ್ಟಿ ಶಿಕ್ಷಕರ ಸಂಘದಿಂದ ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್ ಮಾತನಾಡಿ, ವಿಶ್ವದಲ್ಲೇ ಅತಿ ಶ್ರೇಷ್ಠವಾದ ಸಂವಿಧಾನ ರಚಿಸುವ ಮೂಲಕ ಮಾದರಿಯಾಗಿದ್ದಾರೆ ಎಂದರು.
ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಲು, ಶೋಷಣೆ ತಪ್ಪಿಸಿ ನವ ಸಮಾಜ ನಿರ್ಮಿಸುವಲ್ಲಿ ಅವರು ನೀಡಿದ ಕೊಡುಗೆ ಅಪಾರ ಎಂದು ತಿಳಿಸಿದರು.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕಾಗಿದೆ ಎಂದ ಅವರು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂವಿಧಾನದ ಅಡಿಯಲ್ಲಿ ಉತ್ತಮ ಜೀವನ ನಡೆಸಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಎಸ್ಸಿ.ಎಸ್ಟಿ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ನಾಗರಾಜ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಎನ್.ವಿ.ರಮೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ನಿರ್ದೇಶಕ ವಿ. ಶ್ರೀರಾಮ್, ಚಂದ್ರಪ್ಪ , ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ನಾರಾಯಣಸ್ವಾಮಿ, ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾ & ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ನಾರಾಯಣಸ್ವಾಮಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ವಿ.ನಾರಾಯಣಸ್ವಾಮಿ, ಬಿ.ಮುನಿರಾಜು, ಶಿಕ್ಷಕರ ಸಂಘದನಿಕಟಪೂರ್ವ ಕಾರ್ಯದರ್ಶಿ ಸಿ.ನಾರಾಯಣಸ್ವಾಮಿ, ಎಸ್ಸಿ.ಎಸ್ಟಿ.ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿ.ಮುನಿಯಪ್ಪ. ತಾಲ್ಲೂಕು ಅಧ್ಯಕ್ಷ ವೈ.ವೆಂಕಟೇಶ್ ಸಂಘಟನಾ ಕಾರ್ಯದರ್ಶಿಗಳಾದ ಟಿ.ವೆಂಕಟರೋಣಪ್ಪ, ಬಿ.ವಿ.ನಂಜುಂಡಪ್ಪ ಶಿಕ್ಷಕರ ಮುಖಂಡರಾದ ಕೆ.ಎಂ.ಮುನಿಶಾಮಿ, ಟಿ.ಎಂ.ನಾರಾಯಣಪ್ಪ ಮುಂತಾದವರಿದ್ದರು.