ಅಂಬೇಡ್ಕರ್ ಸ್ಮರಣೆ ಎಲ್ಲರ ಕರ್ತವ್ಯ

ತಿಪಟೂರು, ಏ. ೨೦- ದಲಿತ ಹಾಗೂ ಶೋಷಿತರು ಸಮಾಜದ ಮುಖ್ಯವಾಹಿನಿಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಸಮಾಜದ ಬೇರೆ ಬೇರೆ ವ್ಯವಸ್ಥೆಯಲ್ಲಿ ಮೀಸಲಾತಿಯಿಂದ ವಿವಿಧ ಸ್ತರದ ಹುದ್ದೆಗಳನ್ನು ಹೊಂದಿದ್ದಾರೆ ಎಂದರೆ ಅದಕ್ಕೆ ಅಂಬೇಡ್ಕರ್ ಹಾಕಿಕೊಟ್ಟ ಮೇಲ್ಪಂಕ್ತಿಯೇ ಕಾರಣ. ಆದ್ದರಿಂದ ಅವರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ದಲಿತ ಮುಖಂಡ ಕೆ.ಎಸ್. ವೆಂಕಟೇಶ್‌ಮೂರ್ತಿ ಹೇಳಿದರು.
ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಕರಡಾಳು ಸಂಜೆ ಮೈದಾನದ ಅಂಬೇಡ್ಕರ್ ವೃತ್ತದಲ್ಲಿ ಏರ್ಪಡಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ೧೩೦ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಹುಚ್ಚಯ್ಯ ಮಾತನಾಡಿ, ಮುಂದಿನ ಜನಾಂಗ ಸಂವಿಧಾನ ಬದ್ಧ ಹಕ್ಕುಗಳನ್ನು ಪಡೆಯಬೇಕೆಂದರೆ ಡಾ.ಬಿ.ಆರ್. ಅಂಬೇಡ್ಕರ್ ನೀಡಿರುವ ಸಂವಿಧಾನವನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದರು.
ಕಾರ್ಯಕ್ರಮದಲ್ಲಿ ಹೆಚ್.ಪಿ.ಎಸ್. ಶಾಲೆಯ ಮುಖ್ಯ ಶಿಕ್ಷಕ ರವೀಶ್, ಸಿಆರ್‌ಪಿ ರಾಜಶೇಖರ್, ಗ್ರಾ.ಪಂ. ಸದಸ್ಯ ದರ್ಶನ್, ಶಿಕ್ಷಕರಾದ ಯೋಗಾನಂದ್, ಕಿರಣ್, ಚಂದ್ರಯ್ಯ, ಮುಖಂಡ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.