ಅಕಾಲಿಕ ಮಳೆಯಿಂದಾಗಿ ಶಾಲೆಗಳು ಜಲಾವೃತ

ಹರಿಹರ.ನ.19; ಅಕಾಲಿಕ ಮಳೆಯಿಂದಾಗಿ ತಾಲ್ಲೂಕಿನ ಹಾಲಿವಾಣ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ  ನೀರಿನಲ್ಲಿ ಕೂತು ಮಕ್ಕಳು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸರ್ಕಾರಿ ಶಾಲೆಗಳು ಜಲಾವೃತ ಗೊಂಡಿವೆ ಆದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದರಿಂದ  ಮಕ್ಕಳು ಮಳೆ  ನೀರಲ್ಲಿ ಕುಳಿತುಕೊಂಡು ಪಾಠ ಹೇಳುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಲಿವಾಣ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳು ಮಳೆ ಬಂತೆಂದರೆ ಜಲಾವೃತಗೊಳ್ಳುತ್ತವೆ ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ ಎಂದು ಶಿಕ್ಷಣ ಅಧಿಕಾರಿಗಳಿಗೆ ತಿಳಿಸಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ ವಹಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಪೋಷಕರು ಅಸಮಾಧಾನ ವ್ಯಕ್ತಪಡಿಸಿದರು ಈ ಹಿಂದೆ ಹರಿಹರ ಕ್ಷೇತ್ರದ ಶಾಸಕ ಎಸ್ ರಾಮಪ್ಪನವರಿಗೆ ಗ್ರಾಮದ ಶಾಲೆಗಳು ಸೋರುತ್ತಿರುವ ಬಗ್ಗೆ ದುರಸ್ತಿ ಮಾಡಿಸಬೇಕೆಂದು ಪಾಯಿಂಟ್ ಮನವಿಯನ್ನು ಸಲ್ಲಿಸಲಾಗಿತ್ತು ಕೂಡಲೇ ಶಾಸಕರು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪನವರಿಗೆ ಸೂಚನೆ ನೀಡಿ ಕೂಡಲೇ ಶಾಲೆಯ ದುರಸ್ತಿ ಕಾಮಗಾರಿಗಳನ್ನು ಮಾಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು ಶಿಕ್ಷಣ ಅಧಿಕಾರಿಗಳ ನಿರ್ಲಕ್ಷ ಎದ್ದು ತೋರುತ್ತದೆ ಅಕಾಲಿಕ ಮಳೆಯಿಂದಾಗಿ ಸಾಕಷ್ಟು ಸಾವು ನೋವುಗಳು ಮನೆ ಮಠಗಳು ಜನಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿ ಕೊಂಡಿರುವುದನ್ನು ನಾವು ಕಾಣುತ್ತಿದ್ದೇವೆ ಹರಿಹರ ತಾಲ್ಲೂಕಿನಲ್ಲಿ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಬೇಕಾದರೆ ಮುಂಜಾಗ್ರತಾ ಕ್ರಮವಾಗಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಮ್ಮ ಕೆಲಸವನ್ನು ಮಾಡಿದರೆ ಆಗುವ ಅನಾಹುತಗಳನ್ನು ತಪ್ಪಿಸಿದಂತಾಗುತ್ತದೆ ಕೂಡಲೇ ಎಚ್ಚೆತ್ತುಕೊಂಡು ಶಿಕ್ಷಣಾಧಿಕಾರಿಗಳು ತಾಲ್ಲೂಕಿನ ವಿವಿಧ ಗ್ರಾಮಗಳ ಶಾಲೆಗಳಿಗೆ ಭೇಟಿ ನೀಡಿ ಆಗುವಂಥ ಅವಘಡಗಳನ್ನು ತಪ್ಪಿಸುವ ಕೆಲಸಕ್ಕೆ ಮುಂದಾಗಬೇಕು ಎಂದು  ಪೋಷಕರು ಗ್ರಾಮಸ್ಥರು ಒತ್ತಾಯಿಸಿದ್ದಾರೆ