ಅಕ್ಕಡಿ ಬೆಳೆ ಬೆಳೆದು ಆದಾಯ ಹೆಚ್ಚಿಸಿಕೊಳ್ಳಲು ರೈತರಿಗೆ ಸಲಹೆ

ದಾವಣಗೆರೆ ಜೂ.೯; ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಗೆ ಸುಮಾರು ಹತ್ತು ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯ ಬೆಳೆಯನ್ನು ಪ್ರೋತ್ಸಾಹಿಸಲು 2 ಕೆ.ಜಿ.ಯ ತೊಗರಿ ಕಿರುಚೀಲ ವಿತರಿಸಲಾಗುತಿದ್ದು ರೈತರು ಯೋಜನೆಯ ಸದುಪಯೋಗ ಮಾಡಿಕೊಂಡು ಮೆಕ್ಕೇಜೋಳ ಬೆಳೆಯೊಂದಿಗೆ ಅಕ್ಕಡಿ ಬೆಳೆಗಳನ್ನು ಬೆಳೆದು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಮನವಿ ಮಾಡಿದರು.ಆನಗೋಡು ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ರೈತರಿಗೆ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯ ತರಬೇತಿ ಮತ್ತು ಬೀಜದ ಕಿರುಚೀಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರ ರೈತರಿಗಾಗಿ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಲು ಮತ್ತು ಗುಣಮಟ್ಟದ ಆಹಾರ ಧಾನ್ಯವನ್ನು ಹೆಚ್ಚು ಉತ್ಪಾದನೆ ಮಾಡುವ ಉದ್ಧೇಶದಿಂದ  ಆಹಾರ ಭದ್ರತಾ ಯೋಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ನಮ್ಮ ಜಿಲ್ಲೆಗೆ ಬೇಡಿಕೆ ಇರುವಷ್ಟು ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ದಾಸ್ತಾನಿಕರಿಸಲಾಗಿದೆ. ಯಾವುದೇ ತೊಂದರೆಯಾಗದಂತೆ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಬೀಜ ಮತ್ತು ರಸಗೊಬ್ಬರ ಸಮಪರ್ಕವಾಗಿ ವಿತರಣೆಯಾಗುತ್ತಿದೆ. ಕರೋನ ಸಂಕಷ್ಟದಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವುದೇ ನಿರ್ಬಂಧನೆಗಳನ್ನು ಹೇರಿರುವುದಿಲ್ಲ. ಕೋವಿಡ್ ನಿಯಮಗಳನ್ನು ಪಾಲಿಸಿ ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವೈಜ್ಞಾನಿಕವಾಗಿ ಹೆಚ್ಚು ರಸಗೊಬ್ಬರ ಉಪಯೋಗಿಸದೇ ಅವಶ್ಯವಿರುವಷ್ಟು ಖರೀದಿಸಿ ಅಧಿಕಾರಿಗಳು ತಿಳಿಸಿದಷ್ಟು ಉಪಯೋಗಿಸಿ, ಸಕಾಲದಲ್ಲಿ ಮಳೆ ಬಂದು ರೈತರಿಗೆ ಉತ್ತಮ ಫಸಲು ನೀಡಲೆಂದು ಆಶಿಸುತ್ತೇನೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಜಿಲ್ಲೆಯು ಕರ್ನಾಟಕದ ಮೆಕ್ಕೇಜೋಳ ಕಣಜವಾಗಿದೆ ಹಿಂದಿನ ದಿನಗಳಲ್ಲಿ ಮೆಕ್ಕೇಜೋಳ, ಜೋಳದ ಬೆಳೆಗಳೊಂದಿಗೆ ಅಕ್ಕಡಿ ಬೆಳೆಯಾಗಿ ತೊಗರಿ, ಅಲಸಂದಿ, ಹೆಸರು ಮತ್ತು ಉದ್ದು ಬೆಳೆಗಳನ್ನು ಬೆಳೆಯುವ ಪದ್ಧತಿ ಇತ್ತು. ಕಾಲ ಕ್ರಮೇಣ ರೈತರು ಏಕ ಬೆಳೆ ಪದ್ಧತಿಗೆ ಮಾರು ಹೋಗಿದ್ದಾರೆ. ಆದ್ದರಿಂದ ಜಿಲ್ಲೆಯ ರೈತರಿಗೆ ಏನಾದರೊಂದು ವಿಶೇಷ ಯೋಜನೆಯನ್ನು ಇಲಾಖೆಯಿಂದ ಹಮ್ಮಿಕೊಳ್ಳಬೇಕು ಎಂದು ಯೋಚಿಸಿ ಎಲ್ಲಾ ಜನಪ್ರತಿನಿಧಿಗಳ ಸಹಕಾರದಿಂದ ನಮ್ಮ ಜಿಲ್ಲೆಗೆ ಸುಮಾರು 16 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಒಂದು ಲಕ್ಷ ಕ್ವಿಂಟಾಲ್ ತೊಗರಿ ಉತ್ಪಾದನೆಯ ಗುರಿಯೊಂದಿಗೆ ಈ ಕಾರ್ಯಕ್ರಮವನ್ನು ರೂಪಿಸಿ ಅನುಷ್ಟಾನ ಮಾಡುತ್ತಿದ್ದೇವೆ ಎಂದರು.ಕಾರ್ಯಕ್ರಮದಲ್ಲಿ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಣಬೇರು ಜೀವನ ಮೂರ್ತಿ, ಉಪಕೃಷಿ ನಿರ್ದೇಶಕ ತಿಪ್ಪೇಸ್ವಾಮಿ ಆರ್.,ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ಧನಗೌಡ ಹೆಚ್.ಕೆ., ಕೃಷಿ ಅಧಿಕಾರಿಗಳಾದ ರವಿಕುಮಾರ್, ಚಂದ್ರಪ್ಪ, ಸುರೇಶ್, ರೇಷ್ಮಾ ಹಾಜರಿದ್ದರು.