ಅಕ್ಕಮಹಾದೇವಿ, ಹರಳಯ್ಯ ಜಯಂತಿ ಆಚರಣೆ

ಕಲಬುರಗಿ: ಎ.7:ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿರುವ ‘ಕೊಹಿನೂರ ಸ್ಪೋಕನ್ ಇಂಗ್ಲೀಷ್ ಅಕಾಡೆಮಿ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಶಿವಶರಣೆ ಅಕ್ಕಮಹಾದೇವಿ ಮತ್ತು ಶಿವಶರಣ ಹರಳಯ್ಯನವರ ಜಯಂತಿಯನ್ನು ಆಚರಿಸಲಾಯಿತು.

    ಉಪನ್ಯಾಸಕ, ಶರಣ ಚಿಂತಕ ಎಚ್.ಬಿ.ಪಾಟೀಲ ಉಭಯ ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನಗಳನ್ನು ಸಲ್ಲಿಸಿ ಮಾತನಾಡಿ, ಕನ್ನಡದ ಮೊದಲ ಕವಯತ್ರಿ ಅಕ್ಕ ಮಹಾದೇವಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಮನವಿ ಮಾಡಿದರು. ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಚಿಕ್ಕ ವಯಸ್ಸಿನಲ್ಲಿಯೇ ಸಕಲ ಸುಖವನ್ನು ತ್ಯಜಿಸಿ, ಸಮಾಜಕ್ಕಾಗಿ ಸೇವೆ ಸಲ್ಲಿಸಿದ ಬಹುಮುಖ ವ್ಯಕ್ತಿತ್ವದ ಮಹಿಳಾ ಮೇರು ಶಿಖರವಾಗಿದ್ದಾರೆ. ಶರಣ ಹರಳಯ್ಯನವರು ಅಪ್ರತಿಮ ಕಾಯಕಯೋಗಿ, ಸಮ-ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ನರಸಪ್ಪ ಬಿರಾದಾರ ದೇಗಾಂವ, ಶಿವಯೋಗಪ್ಪ ಬಿರಾದಾರ, ಬಸಯ್ಯಸ್ವಾಮಿ ಹೊದಲೂರ, ಡಾ.ದಾನೇಶ್ ವಗ್ಗಿ, ದತ್ತು ಹಡಪದ ಸೇರಿದಂತೆ ಮತ್ತಿತರರಿದ್ದರು.