ಅಕ್ಕ ಅನ್ನಪೂರ್ಣತಾಯಿ ನಿಧನಕ್ಕೆ ಡಾ. ಅಬ್ದುಲ್ ಖದೀರ್ ಸಂತಾಪ

ಬೀದರ್:ಮೇ.25: ನಗರದ ಲಿಂಗಾಯತ ಮಹಾ ಮಠದ ಅಕ್ಕ ಅನ್ನಪೂರ್ಣತಾಯಿ ಅವರ ನಿಧನಕ್ಕೆ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಕ್ಕ ಅವರು ಜಿಲ್ಲೆಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದರು. ಜನಸಾಮಾನ್ಯರಲ್ಲಿ ಆಧ್ಯಾತ್ಮಿಕ ಜಾಗೃತಿ ಮೂಡಿಸಿದ್ದರು. ವಿವಿಧ ಶಿಬಿರಗಳ ಮೂಲಕ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿದ್ದರು ಎಂದು ಹೇಳಿದ್ದಾರೆ.
ಬಸವ ತತ್ವಕ್ಕೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ಅವರು ನಾಡಿನ ಶ್ರೇಷ್ಠ ಚಿಂತಕರು ಹಾಗೂ ಪ್ರವಚನಕಾರರಾಗಿದ್ದರು. ಅವರ ನಿಧನದಿಂದ ಜಿಲ್ಲೆ ಹಾಗೂ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.