ಅಕ್ರಮವಾಗಿ ಮದ್ಯ ಸಾಗಾಟ:ಇಬ್ಬರು ವಶಕ್ಕೆ


ಸಂಜೆವಾಣಿ ವಾರ್ತೆ
ಗಂಗಾವತಿ, ಏ.11:  ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಮದ್ಯ ಸಮೇತ ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ಅಧಿಕ ಬೆಲೆಗೆ ಮದ್ಯ ಮಾರಾಟ ಮಾಡುವ ಉದ್ದೇಶದಿಂದ ತಾಲೂಕಿನಲ್ಲಿ ದ್ವೀಚಕ್ರ ವಾಹನದ ಮೂಲಕ 8.100 ಲೀಟರ್ ಮದ್ಯವನ್ನು ಸಾಗಾಟ ಮಾಡುತ್ತಿದ್ದವರ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ದೊರೆತ 2 ದ್ವಿಚಕ್ರ ವಾಹನ ಹಾಗೂ 53.161 ರೂಗಳು ಬೆಲೆ ಬಾಳುವ ಮದ್ಯವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

One attachment • Scanned by Gmail