ಅಕ್ರಮವಾಗಿ ಮದ್ಯ ಸಾಗಾಟ : ಅಧಿಕಾರಿಗಳು ದಾಳಿ


ಸಂಜೆವಾಣಿ ವಾರ್ತೆ
ಗಂಗಾವತಿ, ಏ..01:  ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಮದ್ಯ ಸಮೇತ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚುನಾವಣೆಯಲ್ಲಿ ಅಧಿಕ ಬೆಲೆಗೆ ಮದ್ಯ ಮಾರಾಟ ಮಾಡುವ ಉದ್ದೇಶದಿಂದ ಕನಕಗಿರಿ ತಾಲೂಕಿನಲ್ಲಿ ದ್ವಿಚಕ್ರ ವಾಹನದ ಮೂಲಕ 43 ಲೀಟರ್ ಮದ್ಯವನ್ನು ಸಾಗಾಟ ಮಾಡುತ್ತಿದ್ದರು. ಅದೇ ರೀತಿಯಾಗಿ ಗಂಗಾವತಿ ತಾಲೂಕಿನಲ್ಲಿ ಕೂಡ 2 ದ್ವಿ ಚಕ್ರ ವಾಹನದ ಮೂಲಕ 77 ಲೀಟರ್ ಮದ್ಯವನ್ನು ಸಾಗಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿಯನ್ನು ನಡೆಸಿದ್ದಾರೆ. ಎರಡು ಪ್ರತೇಕವಾಗಿ ನಡೆದ ದಾಳಿ ವೇಳೆಯಲ್ಲಿ ದೊರೆತ 3 ದ್ವಿಚಕ್ರ ವಾಹನ ಹಾಗೂ  1,91,997 ರೂಗಳು ಬೆಲೆ ಬಾಳುವ ಮದ್ಯವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.