ಅಕ್ರಮವಾಗಿ ಸಾಗಿಸುತ್ತಿದ್ದ 8.640 ಲೀಟರ್ ಮದ್ಯ ಜಪ್ತಿ

ಯಾದಗಿರಿ,ಏ.21-ಶಹಾಪೂರ ಪಟ್ಟಣದ ಹಯ್ಯಾಳ ಗ್ರಾಮದಲ್ಲಿ ಬೈಕ್ ಮೇಲೆ ಅಕ್ರಮವಾಗಿ ಸಾಗಿಸುತ್ತಿದ್ದ 8.640 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕಲಬುರಗಿ ವಿಭಾಗದ ಅಬಕಾರಿ ಜಂಟಿ ಆಯುಕ್ತರು, ಯಾದಗಿರಿಯ ಅಬಕಾರಿ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಶಹಾಪುರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಆನಂದ ಉಕ್ಕಲಿ ಅವರ ಮಾರ್ಗದರ್ಶನದಲ್ಲಿ ಶಹಾಪುರ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕ ಸುರೇಶ ಕುಮಾರ ಮಳೇಕರ, ಮುಖ್ಯ ಪೇದೆ ಮಡಿವಾಳಪ್ಪ, ವಾಹನ ಚಾಲಕ ವೆಂಕಟೇಶ ಹಾಗೂ ಗೃಹ ರಕ್ಷಕ ಸಿಬ್ಬಂದಿಗಳಾದ ದೇವೆಂದ್ರ ಚಾಕ್ರಿ, ಅಮಲಪ್ಪ ಮತ್ತು ಅಮಲಪ್ಪ ರೆಡ್ಡಿ, ಶ್ರೀ ರಾಮುಲು ದಾಳಿ ನಡೆಸಿ ಮದ್ಯ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಶಹಾಪುರ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕ ಸುರೇಶ ಕುಮಾರ ಮಳೇಕರ್ ಅವರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಯಾದಗಿರಿ ಅಬಕಾರಿ ಉಪ ಆಯುಕ್ತೆ ಶಾರದಾ ಸಿ.ಕೋಲಕಾರ ಅವರು ತಿಳಿಸಿದ್ದಾರೆ.