
ಚಿತ್ರದುರ್ಗ.ಜ.೮; : ತಾಲ್ಲೂಕಿನ ಕಳ್ಳಿರೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಸಾರಾಯಿ ಪ್ಯಾಕೆಟ್ಗಳನ್ನು ಮಾರುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಮಹಿಳಾ ಘಟಕದಿಂದ ಅಪರ ಜಿಲ್ಲಾಧಿಕಾರಿಗೆ ಇಂದು ಮನವಿ ಸಲ್ಲಿಸಿದರು.ಜೆ.ಎನ್.ಕೋಟೆ ಮತ್ತು ಕಳ್ಳಿರೊಪ್ಪ ಗ್ರಾಮದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ಬಡವರೆ ಹೆಚ್ಚಾಗಿ ವಾಸಿಸುತ್ತಿದ್ದು, ದಿನನಿತ್ಯವೂ ಕೂಲಿ ಮಾಡಿ ಜೀವಸುತ್ತಿರುವ ಕುಟಂಬಗಳು ಸಾರಾಯಿ ಕುಡಿತಕ್ಕೆ ಬಲಿಯಾಗುತ್ತಿರುವುದರಿಂದ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುವವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಂಡು ಮಾರಾಟವನ್ನು ನಿಷೇಧಿಸಬೇಕೆಂದು ಅಪರ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.ಕೂಲಿ ಕೆಲಸಕ್ಕೆ ಹೋಗುವ ಪುರುಷರು ದಿನನಿತ್ಯದ ದುಡಿಮೆಯನ್ನೆಲ್ಲಾ ಸಾರಾಯಿಗೆ ಖರ್ಚು ಮಾಡುವುದರಿಂದ ಮನೆಯಲ್ಲಿ ನೆಮ್ಮದಿಯಿಲ್ಲದಂತಾಗಿ ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಕೆ.ರತ್ನಮ್ಮ, ಸುನಂದ, ಸಾಕಮ್ಮ ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.