ಕೋಲಾರ,ಜೂ,೨೩- ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಮ್‌ಪಾಷಾ ಅವರು ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು.
ಕೋಲಾರ ಜಿಲ್ಲಾಧಿಕಾರಿಯಾಗಿ ಅಕ್ರಮ್‌ಪಾಷಾ ರವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು ಅವರು ಅಧಿಕಾರವನ್ನು ವಹಿಸಿ ಕೊಂಡಿದ್ದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಶಂಕರ್ ವಾಣಿಕ್ಯ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಹೂಗುಚ್ಚು ನೀಡಿ ಸ್ವಾಗತಿಸಿ ಶುಭ ಕೋರಿದರು. ಈ ಸಂಧರ್ಭದಲ್ಲಿ ಉಪವಿಭಗಾಧಿಕಾರಿ ವೆಂಕಟಲಕ್ಷ್ಮಿ, ಹಾಗೂ ಜಿಲ್ಲೆಯ ಎಲ್ಲ ತಹಸೀಲ್ದಾರ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.