ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ ಆರೋಪಿ ಸೆರೆ

ಚಾಮರಾಜನಗರ,ಮೇ 2-ಕಾಳಸಂತೆಯಲ್ಲಿ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ‌ ಮಾಡುತ್ತಿದ್ದ ವ್ಯಕ್ತಿ‌ಯೋರ್ವನನ್ನು ವ್ಯಕ್ತಿ‌ಯೋರ್ವನನ್ನು ಕೊಳ್ಳೇಗಾಲ ಪೊಲೀಸರು ಬಂಧಿಸಿದ್ದಾರೆ.
ನಗರದ ಪೀಸ್ ಪಾರ್ಕ್ ರಸ್ತೆಯ ಸಮೀಪ ನಿವಾಸಿ ಶ್ರೀನಿವಾಸ್ (55) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.
ಈತ ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್​ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ದೂರಿನ ಮೇರೆಗೆ ತಹಶೀಲ್ದಾರ್ ಕುನಾಲ್ ಮಾಹಿತಿ ಆಧರಿಸಿದ ಡಿವೈಎಸ್ಪಿ ನಾಗರಾಜು ಹಾಗೂ ವೃತ್ತ ನಿರೀಕ್ಷಕ ಶಿವರಾಜ್ ಬಿ. ಮುಧೋಳ್ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಗಿದ್ದು, ಆರೋಪಿ ಶ್ರೀನಿವಾಸ್ ನನ್ನು ಬಂಧಿಸಿದ್ದಾರೆ.
ಬಂಧಿತನಿಂದ 12 ಆಕ್ಸಿಜನ್ ಸಿಲಿಂಡರ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ‌ 7 ಖಾಲಿ ಸಿಲಿಂಡರ್​ಗಳಾಗಿವೆ. ಸದ್ಯದ ಪರಿಸ್ಥಿತಿಯಲ್ಲಿ ಆಕ್ಸಿಜನ್​ಗೆ ಬಹಳ ಬೇಡಿಕೆ ಇರುವುದರಿಂದ ಈತ ಕಾಳಸಂತೆಯಲ್ಲಿ ಗ್ರಾಹಕರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ರಾಷ್ಟೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಾಗಿದೆ.