ಅಕ್ರಮ ಚಿನ್ನ ಸಾಗಾಟ:ನಾಲ್ವರ ಸೆರೆ


ಬಜ್ಪೆ, ಅ.೧೨- ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ನಾಲ್ಕು ಮಂದಿ ಪ್ರಯಾಣಿಕರಿಂದ ೨೪ ಕ್ಯಾರೆಟ್ ಶುದ್ಧತೆಯ ೩.೮೯೫ ಕೆ.ಜಿ.ಯ ಒಟ್ಟು ೨.೦೧ ಕೋ.ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ನ.೧೦ರಂದು ದುಬೈನಿಂದ ಬಂದ ವಿಮಾನದಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ ನಾಲ್ಕು ಮಂದಿ ಪ್ರಯಾಣಿಕರು ಟ್ರಾಲಿ ಬ್ಯಾಗ್‌ಗಳಲ್ಲಿ ರೋಡಿಯಂ ಲೇಪಿತ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಕ್ಕೆ ಪಡೆದು ಕೊಂಡಿದ್ದಾರೆ. ನಾಲ್ವರನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು  ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.